ಬೆಂಗಳೂರು: ಕೋವಿಡ್ 19 ಮಹಾಮಾರಿಯಿಂದಾಗಿ ಮುಚ್ಚಿದ್ದ ಶಾಲೆಗಳು ಬರೋಬ್ಬರಿ ಒಂದು ವರ್ಷದ ಬಳಿಕ ಪೂರ್ಣ ಪ್ರಮಾಣದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿನ್ನೆಲೆಯಲ್ಲಿ ಫೆ.22ರಿಂದ 1-5ನೇ ತರಗತಿವರೆಗೆ ವಿದ್ಯಾಗಮ ಶಾಲೆಗಳು ಆರಂಭವಾಗಲಿದೆ. ವಿದ್ಯಾಗಮ ನೋಡಿಕೊಂಡು ಶೀಘ್ರದಲ್ಲೇ ಪುರ್ಣ ಪ್ರಮಾಣದಲ್ಲಿ ಶಾಲೆ ಆರಂಭಕ್ಕೆ ಒಪ್ಪಿಗೆ ಸೂಚಿಸಲಾಗಿದೆ.
ಇನ್ನು ಫೆ.22ರಿಂದ 6-8ನೇ ತರಗತಿವರೆಗೆ ಭೌತಿಕ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುತ್ತಿದೆ. ಈ ಮೂಲಕ ವರ್ಷದ ಬಳಿಕ ರಾಜ್ಯದಲ್ಲಿ ಮತ್ತೆ ಶಾಲೆಗಳು ಪುನರಾರಂಭವಾಗುತ್ತಿದೆ.