ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ, ನೆಲದ ಸಂಸ್ಕ್ರತಿ ಮಕ್ಕಳಿಗೆ ತಿಳಿಸಿ: ಕೇಶವ ಬಂಗೇರ

ಬೆಳ್ತಂಗಡಿ: ನಮ್ಮ ಮಣ್ಣಿನ ಸನಾತನ ಸಂಸ್ಕ್ರತಿಯು ಅತ್ಯಂತ ಪವಿತ್ರವಾದುದು. ಅದನ್ನು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ದಾಟಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಹೇಳಿದರು.

ತಾಲ್ಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ವತಿಯಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಶನಿವಾರ ಆಯೋಜಿಸಿದ್ದ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆಯ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು. ಭಾರತದ ಸಂಸ್ಕೃತಿಯ ಮೇಲೆ ಪರಕೀಯ ಸಂಸ್ಕೃತಿಗಳು ನಿರಂತರವಾಗಿ ದಾಳಿ ನಡೆಸಿದರೂ ನಮ್ಮ ನೆಲದ ಸಂಸ್ಕೃತಿ ಇನ್ನೂ ಶ್ರೀಮಂತವಾಗಿದೆ. ಇದನ್ನು ನಮ್ಮ ಮಕ್ಕಳಿಗೆ ತಿಳಿಸುವ ಮೂಲಕ ಧರ್ಮ ಕಟ್ಟುವ, ಸಮಾಜ ಕಟ್ಟುವ ಕೆಲಸದಲ್ಲಿ ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.ಯುವಸಂಪತ್ತು ನಮ್ಮ ದೇಶದ ದೊಡ್ಡ ಆಸ್ತಿ. ಯುವ ಸಮುದಾಯವು ಸಮಾಜ ಕಟ್ಟುವ ಕೆಲಸದಲ್ಲಿ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಮರೋಡಿಯ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಸಂಘಟನೆ ಮಾದರಿಯಾಗಿದೆ ಎಂದು ಹೇಳಿದರು.

ಕಂಬಳ ಕ್ಷೇತ್ರದ ಸಾಧಕ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪ್ರದೀಶ್ ಮರೋಡಿ, ಕರ್ನಾಟಕ ಕೀಡಾರತ್ನ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ಶ್ರೀಧರ ಮರೋಡಿ, ಅಕ್ಷರ ಸಿರಿ ಪ್ರಶಸ್ತಿ ಪುರಸ್ಕೃತ ಬಂದಾರು ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಗೌರವಾಧ್ಯಕ್ಷ ಯಶೋಧರ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಸರ ವಿಜಯ ಆರಿಗ, ಶಿರ್ತಾಡಿ ಪ್ರಭಾ ಕ್ಲಿನಿಕ್‌ನ ಡಾ.ಆಶೀರ್ವಾದ್‌, ಪ್ರಗತಿಪರ ಕೃಷಿಕ ರವೀಂದ್ರ ಹೆಗ್ಡೆ ಉಚ್ಚೂರು, ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಅಧ್ಯಕ್ಷ ರಾಘವ ಪೂಜಾರಿ, ಯುವ ಉದ್ಯಮಿ ದಿನೇಶ್‌ ಬುಣ್ಣಾನ್ ಇಸ್ರೇಲ್‌ ಮುಖ್ಯ ಅತಿಥಿಯಾಗಿದ್ದರು.

ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.ಸುಬ್ರಹ್ಮಣ್ಯ ಪ್ರಸಾದ್ ಅವರ ಪೌರೋಹಿತ್ಯದಲ್ಲಿ ಕಲಶ ಪ್ರತಿಷ್ಠೆ, ಶ್ರೀ ಶನೈಶ್ವರ ಪೂಜೆ, ಉಮಾಮಹೇಶ್ವರ ದೇವರಿಗೆ ರಂಗಪೂಜೆ ನಡೆಯಿತು. ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಉಮೇಶ್‌ ಮಿಜಾರ್‌ ಸಾರಥ್ಯದ ನಮ್ಮ ಕಲಾವಿದೆರ್‌ ಬೆದ್ರ ಇವರಿಂದ ‘ಕುಸಲ್ದ ಗೊಬ್ಬು’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು. ಗಣೇಶ್ ಬಿ. ಕಾರ್ಯಕ್ರಮ ನಿರೂಪಿಸಿದರು.

Spread the love
  • Related Posts

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ನ.03 ರಂದು ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ.…

    Spread the love

    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲಪಲ್ಕೆ ಎಂಬಲ್ಲಿ ಹಾಲು ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಡಿಡುಪೆ ಕುಕ್ಕಾವು ಕಡೆಯಿಂದ ಹಾಲು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದು ಸುಮಾರು 5000ಲೀಟರ್ ಗಿಂತಲೂ ಹೆಚ್ಚು…

    Spread the love

    You Missed

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    • By admin
    • November 3, 2024
    • 83 views
    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    • By admin
    • October 31, 2024
    • 78 views
    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    • By admin
    • October 30, 2024
    • 52 views
    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

    • By admin
    • October 26, 2024
    • 53 views
    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

    ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

    • By admin
    • October 26, 2024
    • 47 views
    ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

    ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ

    • By admin
    • October 23, 2024
    • 94 views
    ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ  ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ