TRENDING
Next
Prev

ABVP ವತಿಯಿಂದ ಭಗತ್ ಸಿಂಗ್, ರಾಜ್ ಗುರು ಹಾಗೂ ಸುಖ್ದೇವ್ ಬಲಿದಾನ ದಿವಸ್ ಪ್ರಯುಕ್ತ ಸಾರ್ವಜನಿಕ ಸಭೆ

ಬಂಟ್ವಾಳ: ಭಗತ್ ಸಿಂಗ್, ರಾಜ್ ಗುರು ಹಾಗೂ ಸುಖ್ದೇವ್ ಬಲಿದಾನದ ಸ್ಮರಣಾರ್ಥ ಬಂಟ್ವಾಳ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ಬಿ.ಸಿ.ರೋಡಿನ ಕೈಕಂಬದಿಂದ ಬೃಹತ್ ಕಾಲ್ನಡಿಗೆ ಜಾಥಾ ಹಾಗೂ ಸ್ಪರ್ಶ ಕಲಾಮಂದಿರದಲ್ಲಿ ಸಾರ್ವಜನಿಕ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ವಕೀಲ ಹಾಗೂ ಹಿರಿಯ ಆರೆಸ್ಸೆಸ್ ಮುಖಂಡ ಪ್ರಸಾದ್ಕುಮಾರ್ ರೈ ಮಾತನಾಡಿ, ಪ್ರಾಣವನ್ನು ಅರ್ಪಿಸಿದ ಭಗತ್ ಸಿಂಗ್ ರಕ್ತದಲ್ಲಿಯೇ ಸ್ವಾತಂತ್ರ್ಯ ಹೋರಾಟದ ಕಿಚ್ಚು ಇತ್ತು ಎಂದರು.

READ ALSO

ಮಂಗಳೂರು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕರ ಕಚೇರಿಯ ವಿಶೇಷ ಅಧಿಕಾರಿ ದೇವಿಪ್ರಸಾದ್ ಮಾತನಾಡಿ, ಭಗತ್ ಆದರ್ಶದೊಂದಿಗೆ ನಾವು ಕೂಡ ದೇಶಕ್ಕೆ ಸೇವೆ ನೀಡಲು ಸಂಕಲ್ಪ ಕೈಗೊಳ್ಳಬೇಕಿದೆ ಎಂದರು.

ಸಭಾ ಕಾರ್ಯಕ್ರಮಕ್ಕೆ ಮೊದಲು ಕೈಕಂಬದಿಂದ ಜಾಥಾ ನಡೆಯಿತು.

ನಿವೃತ್ತ ಪ್ರಾಧ್ಯಾಪಕ ಪ್ರೊ. ನಾರಾಯಣ ಭಂಡಾರಿ, ಎಬಿವಿಪಿ ಜಿಲ್ಲಾ ಸಂಚಾಲಕ ಹರ್ಷಿತ್ ಕೊಯಿಲ, ವಿಭಾಗ ಸಂಚಾಲಕ ಸಂದೇಶ್ ರೈ ಮಜಕ್ಕಾರು ಪ್ರಸ್ತಾವನೆಗೈದರು. ಕಾರ್ಯಕ್ರಮದಲ್ಲಿ ಎಬಿವಿಪಿಯ ಮುಖಂಡರುಗಳಾದ ಬಸವೇಶ್ ಕೇೂರಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ,ಬಂಟ್ವಾಳ ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ಸಹಸಂಚಾಲಕರಾದ ಅಖಿಲಾಷ್, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ,ವಿದ್ಯಾರ್ಥಿನಿ ಪ್ರಮುಖರಾದ ನಿಶಾ ,ಅನಿತಾ ,ಲಿಖಿತಾ,ಅಶ್ವಿತಾ, ಜಯಲಕ್ಷ್ಮೀ, ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಸಿದ್ದಕಟ್ಟೆ ಸ್ವಾಗತಿಸಿದರು. ದಿನೇಶ್ ಕೊಯಿಲ ವಂದಿಸಿದರು. ಪ್ರಜ್ವಲ್ ಸಿದ್ದಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.