ಕಲ್ಮಂಜ ಗ್ರಾ.ಪಂ ಗೆ ಎಸಿಬಿ ದಾಳಿ!

ಬೆಳ್ತಂಗಡಿ: ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದೂರು ಸಲ್ಲಿಕೆಯ ಹಿನ್ನೆಲೆಯಲ್ಲಿ ಕಲ್ಮಂಜ ಗ್ರಾಮ ಪಂಚಾಯತ್ ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಸವ ವಸತಿ ಯೋಜನೆ ಹಾಗೂ 94ಸಿ ಯಲ್ಲಿ ಅಕ್ರಮ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

READ ALSO

ACB ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್ ನೇತ್ರತ್ವದಲ್ಲಿ ದಾಳಿ ನಡೆಸಿದ್ದು ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.

ಒಂದೇ ಕುಟುಂಬದ ಮೂವರಿಗೆ ಬಸವ ವಸತಿ ಯೋಜನೆ ಹಾಗೂ 94.ಸಿ ಯಲ್ಲಿ ಸರಕಾರದ ಯೋಜನೆಯಲ್ಲಿ ಮನೆಗಳನ್ನು ಪಡೆದಿರುವ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಯುತ್ತಿದೆ.

ಎಸಿಬಿಯ ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್.ಬಿ.ಸಿ, ಹೆಡ್ ಕಾನ್ಸ್ಟೇಬಲ್ ಹರಿಪ್ರಸಾದ್, ಪ್ರಶಾಂತ್ ಪಾಲ್ಗೊಂಡಿದ್ದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಿಸಲಾಗುತ್ತಿದೆ.