TRENDING
Next
Prev

ಮದುವೆಗೆ ಹೊರಟವರು ಮಸಣ ಸೇರಿದರು! ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾ‌ತ ನಾಲ್ವರು ದುರ್ಮರಣ 11 ಮಂದಿಗೆ ಗಾಯ ಒರ್ವರ ಸ್ಥಿತಿ ಗಂಭೀರ!

ಹಾಸನ: ಹಾಸನ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಟಾಟಾ ಸುಮೋಗೆ ಹಿಂದಿನಿಂದ ಕ್ವಾಲಿಸ್ ಡಿಕ್ಕಿಯಾಗಿ ಘಟನೆ ನಡೆದಿದೆ.

ಅಪಘಾತದಲ್ಲಿ ನಾಲ್ವರು ಮೃತಪಟ್ಟು, 11 ಜನ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕಂಷಟ್ಟಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಕೋಲಾರ ಜಿಲ್ಲೆ ಕೆಜಿಎಫ್ ಮೂಲದ ಪ್ರದೀಪ್ ಕುಮಾರ್, ಪುನೀತ್, ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

READ ALSO

ಗಾಯಾಳುಗಳನ್ನು ಹಾಸನ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯ ಮದುವೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಾಸನ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.