ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗೆ ಅಪಘಾತ!

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಟ ವಿಜಯ್‌ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ರಾತ್ರಿಯೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗ್ತಿದೆ.

READ ALSO

ಚಿಕಿತ್ಸೆ ನೀಡಿದ ವೈದ್ಯರಾದ ನ್ಯೂರೋ ಸರ್ಜನ್ ಡಾ.ಅನಿಲ್​ ಕುಮಾರ್ ಅವ್ರು ಹೇಳುವಂತೆ, ‘ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆದ್ರೆ, ಆಸ್ಪತ್ರೆಗೆ ತಂದಾಗಲೇ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಕ್ಯಾನ್​ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ, ಅವರಿಗೆ ಮೆದುಳಿನ ಆಪರೇಷನ್ ನೆರವೇರಿಸಲಾಗಿದೆ. ಇನ್ನು ತೊಡೆ ಮೂಳೆಯ ಶಸ್ತ್ರ ಚಿಕಿತ್ಸೆ ಕೂಡ ನಡೆಸಬೇಕಿದೆ. ಸಧ್ಯ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಮುಂದಿನ 48 ಗಂಟೆಗಳು ಅತ್ಯಂತ ಮುಖ್ಯವಾಗಿದೆ’ ಎಂದರು.