ಜಮೀನಿನಲ್ಲಿಯೇ ಬೆಳೆ ಸಮೀಕ್ಷೆ ಆ್ಯಪ್‍ಗೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ್

ಕಾರವಾರ  ಆಗಸ್ಟ 15 : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯ ಆ್ಯಪ್‍ನಿಂದ ರೈತರ ಜಮೀನಿಗೆ ತೆರಳಿ ರೈತರಿಂದಲೇ ಬೆಳೆಯನ್ನು ನಮೂದಿಸುವ ಕಾರ್ಯಕ್ಕೆ ಸಕ್ಕರೆ,  ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಶನಿವಾರ  ಚಾಲನೆ ನೀಡಿದರು.

ತಾಲೂಕಿನ ಬಿಣಗಾ ಗ್ರಾಮದ ರೈತ ವಾಸು ದಿಲಗಾ ಗೌಡ  ಅವರ ರಿ.ಸ.ನಂ 25/03 ಜಮೀನಿನಲ್ಲಿ ಬೆಳೆದ ಭತ್ತದ  ಬೆಳೆಯ ಛಾಯಾಚಿತ್ರ ಅಪ್‍ಲೋಡ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಬೆಳೆ ಸಮೀಕ್ಷೆ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೆ ನಂಬರ, ಹಿಸ್ಸಾ ನಂಬರವಾರು ತಾವು ಬೆಳೆದ ಕೃಷಿ ಬೆಳೆ ಹಾಗೂ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ ಇತರೆ ಬೆಳೆ ಸಮೀಕ್ಷೆ 2020 ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನೋಂದಾಯಿಸಬಹುದಾಗಿದೆ ಎಂದು ತಿಳಿಸಿದರು. 

ಬೆಳೆ ನಮೂದಿಸಲು ಆಗಸ್ಟ 24 ಕೊನೆಯ ದಿನವಾಗಿದ್ದು, ರೈತರು ನಿಗದಿತ ಸಮಯದಲ್ಲಿ ತಾವು ಬೆಳೆದ ಬೆಳೆಯನ್ನು ಅಪ್‍ಲೋಡ್ ಮಾಡಬೇಕು. ಈ ಯೋಜನೆಯ ಸದುಪಯೋಗವನ್ನು ರೈತರು ಪಡದುಕೊಳ್ಳಬೇಕು. ಇಲ್ಲದಿದ್ದರೆ ಇಲಾಖೆಯಿಂದ ದೊರೆಯುವ ವಿವಿಧ ಸೌಲತ್ತುಗಳಿಂದ ವಂಚಿತರಾಗುವಿರಿ ಎಂದು ತಿಳಿಸಿದರು.

ಈ ಸಮೀಕ್ಷೆಯಿಂದ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆಯಡಿ ಸರ್ವೆ ನಂಬರವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಹಾಗೂ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕೆ ಸಹಾಯವಾಗಲಿದೆ ಎಂದು ತಿಳಿಸಿದರು.

ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಬೆಳೆಗಳ ವಿವರಗಳನ್ನು ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಮ್ಮ ಭಾಗದ ರೈತ ಸಮೂದಾಯ ಬೆಳೆ ಮಾಹಿತಿಯನ್ನು ದಾಖಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು  ತಿಳಿಸಿದರು.

 ಈ  ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ  ಜಿಲ್ಲಾಧಿಕಾರಿ ಡಾ.ಕೆ. ಹರೀಶ ಕುಮಾರ,   ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್. ಕೆ.  ಕೃಷಿ ಜಂಟಿ ನಿರ್ದೇಶಕ ಹೊನ್ನಪಗೌಡ  ಸೇರಿದಂತೆ ಇತರರು ಹಾಜರಿದ್ದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    • By admin
    • October 21, 2026
    • 2 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 5 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 6 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 8 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 10 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 11 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ