ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ ತಿದ್ದುಪಡಿ ಕಾಯಿದೆಗೆ ಅನುಮೋದನೆ ದೊರೆತಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಆದಾಯ ಮಿತಿ ಇಲ್ಲದೆ ಹಾಗೂ ಕೃಷಿ ಕುಟುಂಬದ ಹಿನ್ನೆಲೆ ಹೊಂದಿಲ್ಲದವರೂ ಸಹ ಕೃಷಿ ಜಮೀನು ಖರೀದಿ ಮಾಡಬಹುದು.

1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಪ್ರಕಾರ ಈವರೆಗೆ ಕೃಷಿಕರು, ಕೃಷಿ ಮೂಲದ ಕುಟುಂಬದವರು ಮಾತ್ರ ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸಲು ಸಾಧ್ಯವಿತ್ತು.

ಕೃಷಿಕರಲ್ಲದವರು ಕೃಷಿ ಮಾಡಲು ಆಸಕ್ತಿ ಹೊಂದಿದ್ದರೂ ಕೃಷಿ ಭೂಮಿ ಖರೀದಿಸಲು ಕಾಯ್ದೆಯಲ್ಲಿ ಅವಕಾಶವಿರಲಿಲ್ಲ. ಇಂತಹವರಿಗೆ ಅವಕಾಶ ಮಾಡಿಕೊಡಲು ಕೇವಲ ಕೃಷಿ ಸಂಬಂಧಿ ಚಟುವಟಿಕೆಗೆ ಮಾತ್ರ ಬಳಸುವ ಷರತ್ತು ವಿಧಿಸಿ ಯಾರು ಬೇಕಾದರೂ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿಮೆ ಮಾಡದೆ ಬೀಳು ಬಿದ್ದಿರುವ ಲಕ್ಷಾಂತರ ಎಕರೆಯಲ್ಲಿ ಕೃಷಿ ಚಟುವಟಿಕೆ ಶುರುವಾಗಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಕ್ಕೆ ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ತಿದ್ದುಪಡಿಯ ನಂತರ ಧನವಂತರು ಕೃಷಿ ಭೂಮಿ ಖರೀದಿಸಿ ಕ್ರಮೇಣ ರಿಯಲ್‌ ಎಸ್ಟೇಟ್‌ ಮುಂತಾದ ಅನ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

ಏನಿದು ಕಾಯಿದೆ ತಿದ್ದುಪಡಿ?

ಭೂ ಸುಧಾರಣೆ ಕಾಯ್ದೆಯಡಿ ಜಾರಿಯಲ್ಲಿರುವ 63ಎ, 79ಎ ಹಾಗೂ ಬಿ ಸೆಕ್ಷನ್‌ ಪ್ರಕಾರ ರೈತ ಹಿನ್ನೆಲೆ ಹೊಂದಿಲ್ಲದವರು ಹಾಗೂ ನಿರ್ದಿಷ್ಟಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಕೃಷಿ ಜಮೀನು ಖರೀದಿಸಲು ಅವಕಾಶ ಇರಲಿಲ್ಲ. ಇದೀಗ ಮೂರು ಸೆಕ್ಷನ್‌ ರದ್ದುಪಡಿಸಿದ್ದು, ಇನ್ನು ಮುಂದೆ ಒಂದೇ ಕುಟುಂಬದಲ್ಲಿ 5 ಸದಸ್ಯರು ಇದ್ದರೆ 108 ಎಕರೆಗಿಂತ ಹೆಚ್ಚು ಜಮೀನು ಖರೀದಿಸುವಂತಿಲ್ಲ ಎಂದು ಮಾಡಲಾಗಿದೆ.

ಸರ್ಕಾರದ ವಾದವೇನು?

ಇತ್ತೀಚೆಗೆ ಐಟಿ-ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಕೃಷಿಯತ್ತ ಆಕರ್ಷಿತರಾಗುತ್ತಿದ್ದಾರೆ. ಜತೆಗೆ ನಮ್ಮ ರಾಜ್ಯದಲ್ಲಿ ಹೊರತುಪಡಿಸಿ ಬೇರೆಲ್ಲೂ ಕೃಷಿ ಭೂಮಿ ಖರೀದಿಗೆ ಇಂತಹ ನಿರ್ಬಂಧವಿಲ್ಲ. ರಾಜ್ಯದಲ್ಲಿನ ನಿರ್ಬಂಧದಿಂದಾಗಿ ನೆರೆ ರಾಜ್ಯದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. 79 ಎ, ಬಿನಲ್ಲಿ ಅನಗತ್ಯವಾಗಿ 83,174 ಪ್ರಕರಣಗಳು ದಾಖಲಾಗಿದ್ದವು. ಶೇ.1ರಷ್ಟುಸಹ ಸರ್ಕಾರದಿಂದ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದು ಸರ್ಕಾರದ ವಾದವಾಗಿದೆ.

Spread the love
  • Related Posts

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮರಾಗಿದ್ದಾರೆ. ಜಮ್ಮುವಿನ ಪೂಂಚ್‌ನಲ್ಲಿ ಗಸ್ತು ತಿರುಗುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಸೇನೆಯ 25 ರಾಷ್ಟ್ರೀಯ ರೈಫಲ್ಸ್‌ನ ಹವಾಲ್ದಾರ್ ವಿ. ಸುಬ್ಬಯ್ಯ ವರಿಕುಂಟಾ ಅವರು ಸಾವನ್ನಪ್ಪಿದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಉತ್ತರ…

    Spread the love

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    ಮುರುಡೇಶ್ವರ: ಕೋಲಾರದ ಮುಳಬಾಗಿಲು ಮೊರಾರ್ಜಿದೇಸಾಯಿ ವಸತಿ ಶಾಲೆಯ ಮಕ್ಕಳ ಪ್ರವಾಸ ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದ ಸಮುದ್ರ ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದಾರೆ. ಶ್ರಾವಂತಿ, ದೀಕ್ಷಾ, ಲಾವಣ್ಯ ಈ ಮೂವರು ವಿದ್ಯಾರ್ಥಿನೀಯರು ನೀರಿನಲ್ಲಿ ಮುಳುಗಿದ್ದು ಶ್ರಾವಂತಿ ಎಂಬವಳು ಸಾವನ್ನಪ್ಪಿದ್ದಾಳೆ.…

    Spread the love

    You Missed

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 49 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 68 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    • By admin
    • December 10, 2024
    • 30 views
    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    • By admin
    • December 10, 2024
    • 45 views
    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    • By admin
    • December 10, 2024
    • 99 views
    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ

    • By admin
    • December 9, 2024
    • 74 views
    ಪೆರ್ಲ – ಬೈಪಾಡಿ  ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ  ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ