ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

ಬೆಳ್ತಂಗಡಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರಿಂದ ರಸ್ತೆ ತಡೆ ಪ್ರತಿಭಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಹಾಗೂ ಸಾರ್ವಜನಿಕರ ಸಂಚಾರ ದುಸ್ತರವಾಗಿರುವ ಹಿನ್ನೆಲೆ ಸ್ಥಳೀಯ ನಿವಾಸಿಗಳು ಹಾಗೂ ರಿಕ್ಷಾ ಚಾಲಕರು ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಆರಂಭಿಸಿದರು.

ನೇತ್ರಾವತಿ ಸ್ನಾನಘಟ್ಟ–ಅಜಿಕುರಿ ಮಾರ್ಗವಾಗಿ ದಿಡುಪೆ–ಪೈಚಾರು ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಕಳೆದ ಐದು ವರ್ಷಗಳಿಂದ ತೀವ್ರ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿವೆ. ಕನಿಷ್ಠ ದುರಸ್ತಿ ಕಾಮಗಾರಿಯೂ ನಡೆಯದ ಕಾರಣ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ರಸ್ತೆಯಲ್ಲಿ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಿದ್ದು, ಹೊಂಡಗಳಿಂದ ನಡೆದು ಹೋಗುವುದೂ ಕಷ್ಟಕರವಾಗಿದೆ. ವಾಹನಗಳು ಅಪಘಾತಕ್ಕೀಡಾಗುವ ಘಟನೆಗಳೂ ಪದೇಪದೇ ನಡೆಯುತ್ತಿವೆ ಎಂದು ಅವರು ದೂರಿದರು.

ಒಂದು ಗಂಟೆಗೂ ಅಧಿಕ ಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಸ್ತೆ ದುರಸ್ತಿಗೆ ಸ್ಪಷ್ಟ ಭರವಸೆ ನೀಡುವವರೆಗೆ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 4 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ