ಮುಂಬೈ: ಬಾಲಿವುಡ್ನ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿರುವ ಕಾರಣ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು.
ಚಿಕಿತ್ಸೆಗೆ ಮುನ್ನ ಅವರಿಗೆ ಕೋವಿಡ್-19 ಟೆಸ್ಟ್ ನಡೆಸಿದ್ದು, ಈ ವೇಳೆ ಕೊರೊನಾ ಪಾಸಿಟಿವ್ ಇರುವುದು ಕನ್ಫರ್ಮ್ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಮಾಹಿತಿ ಹೊರಹಾಕಿದ್ದಾರೆ. ಸಧ್ಯ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಅಮಿತಾಬ್ ಬಚ್ಚನ್ ಮತ್ತು ಆಯುಷ್ಮನ್ ಖುರಾನಾ ಅಭಿನಯದ ಗುಲಾಬೋ ಸಿತಾಬೋ ಚಿತ್ರವನ್ನು ಜೂನ್ 12ಕ್ಕೆ ಜಗತ್ತಿನಾದ್ಯಂತ ಅಮೆಜಾನ್ ಪ್ರೈಮ್ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಮುಂದಾಗಿದ್ದರು.