ರಾಜಕೀಯಕ್ಕೆ ಕರ್ನಾಟಕದ ಸಿಂಗಂ ಎಂಟ್ರಿ! ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶ


ತಮಿಳುನಾಡು: ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಅಧಿಕೃತವಾಗಿ ಅಣ್ಣಾ ಮಲೈ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ತಮಿಳುನಾಡಿನಲ್ಲಿ ಬಿ.ಜೆ.ಪಿ ಹೊಸ ದೂರದೃಷ್ಟಿ ನೀಡುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾಗಲಿದ್ದಾರೆ.

READ ALSO

ಸುಮಾರು 10 ವರ್ಷಗಳ ಕಾಲ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಯಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಡಿ.ಸಿ.ಪಿ, ಎಸ್.ಪಿ ಯಾಗಿ ಸೇವೆ ಸಲ್ಲಿಸಿದ ಬಳಿಕ ಸ್ವಯಂ ನಿವೃತ್ತಿ ಪಡೆದಿರುವ ಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ.

ಅಣ್ಣಾಮಲೈ ರಾಜೀನಾಮೆಯ ಬೆನ್ನಲ್ಲೇ ರಾಜಕೀಯಕ್ಕೆ ಎಂಟ್ರಿಕೊಡ್ತಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದ್ದವು.

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಕೊಯಮತ್ತೂರು ವಿಧಾನಸಭಾ ಕ್ಷೇತ್ರದಿಂದಲೇ ರಾಜಕೀಯ ಧುಮುಕಲಿದ್ದು, ಜನರ ಸೇವೆಯನ್ನು ಮಾಡಲಿದ್ದೇನೆ. ಕುಟುಂಬದೊಂದಿಗೆ ಕಾಲಕಳೆಯುವುದರ ಜೊತೆಗೆ ರಾಜಕೀಯ ಕ್ಷೇತ್ರದಲ್ಲಿಯೂ ತನ್ನನ್ನು ತೊಡಗಿಸಿಕೊಳ್ಳಲಿದ್ದೇನೆ. ಬಿಜೆಪಿ ರಾಷ್ಟ್ರೀಯವಾದಿ ಪಕ್ಷ ನಾನು ರಾಷ್ಟ್ರೀಯವಾದಿ ಎಂದು ಹೇಳಿಕೊಂಡಿದ್ದಾರೆ.