ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರದ ಗ್ರೀನ್ ಸಿಗ್ನಲ್

ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಜುಲೈ ತಿಂಗಳಿನಲ್ಲಿ ಉಪನ್ಯಾಸಕರ ಕೌನ್ಸಿಲಿಂಗ್ ನಡೆಸಲು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆಯನ್ನು ನೀಡಿದ್ದು, ನೇಮಕಾತಿಯ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಖುಷಿಕೊಟ್ಟಿದೆ.

ಹಲವು ವರ್ಷಗಳಿಂದಲೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆ ನೇಮಕಾತಿ ನಡೆಸಬೇಕೆಂಬ ಕೂಗು ಕೇಳಿಬಂದಿತ್ತು. ಆದರೆ ರಾಜ್ಯ ಸರಕಾರ ಉಪನ್ಯಾಸಕರ ನೇಮಕಾತಿಯನ್ನು ಮಾಡಿಕೊಂಡಿರಲಿಲ್ಲ. ಇದೀಗ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರ ಮುಂದಾಗಿದ್ದು, ಆನ್ ಲೈನ್ ಮೂಲಕವೇ ನೇಮಕಾತಿ ಪ್ರಕ್ರೀಯೆಯನ್ನು ನಡೆಸಲು ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

READ ALSO