ಬೆಳ್ತಂಗಡಿ: ಶ್ರವಣದೋಷದಿಂದಾಗಿ ಮಾತನಾಡುವ ಸಮಸ್ಯೆಯನ್ನು ಎದುರಿಸುತ್ತಿರುವ ತಾಲೂಕಿನ ತಣ್ಣೀರುಪಂಥ ಗ್ರಾಮದ ದೇಸಿನ್ ಕೊಡಿ ರವಿ ಪೂಜಾರಿ ಅವರ ಮೂರು ವರ್ಷ 7 ತಿಂಗಳು ವಯಸ್ಸಿನ ಮಗಳಾದ ಆರಾಧ್ಯಳ ಚಿಕಿತ್ಸೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಲಕ್ಷ ರೂ ವಿತರಣೆಗೆ ಆದೇಶ ಹೊರಡಿಸಿದ್ದಾರೆ .
ಇಂದು ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಶಾಸಕ ಹರೀಶ್ ಪೂಂಜಾರ ಮುಖಾಂತರ ಭೇಟಿಯಾದ ಮಗುವಿನ ಪೋಷಕರು, ಮಗುವಿನ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಬಳಿ ಸಹಾಯವನ್ನು ಕೇಳಿದ್ದರು.
ಕೂಡಲೇ ಈ ಮನವಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಗುವಿನ ಚಿಕಿತ್ಸೆಗೆ 5ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.