ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು.ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ.

ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು ಎಂದರು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9,500 ರೂ. ಪಾವತಿ ಮಾಡಲಾಗುತ್ತಿದೆ. ಇದನ್ನು ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸಿದ್ಧ. ಆದರೆ ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ ಪ್ರೋತ್ಸಾಹಧನವನ್ನೂ ಮಾಸಿಕ ವೇತನದ ರೂಪದಲ್ಲಿ ನಿಗದಿಪಡಿಸಿ ನೀಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ ಎಂದು ಅವರು ತಿಳಿಸಿದರು.

ಮುಂಬರುವ ರಾಜ್ಯ ಬಜೆಟ್‍ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ರಾಜ್ಯ ಸರಕಾರದಿಂದ ನೀಡುತ್ತಿರುವ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸಕಾರಾತ್ಮಕ ಚಿಂತನೆ ಹೊಂದಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಮುಷ್ಕರ ಕೈ ಬಿಡಬೇಕು ಎಂದು ಅವರು ಮನವಿ ಮಾಡಿದರು. ಇನ್ನು ರಜೆಗಳನ್ನು ಕೇಳುವುದು ಆಶಾ ಕಾರ್ಯಕರ್ತೆಯರ ಹಕ್ಕು. ಈ ನಿಟ್ಟಿನಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಭರವಸೆ ನೀಡಿದರು

ಬೇಡಿಕೆ ಈಡೇರುವವರೆಗೆ ಮುಷ್ಕರ ವಾಪಾಸ್ ಇಲ್ಲ:

ಸಚಿವರ ಭೇಟಿ ನಂತರವೂ ಸಂಘದ ಮುಖಂಡರು ಸಭೆ ನಡೆಸಿದ್ದು, ಈಗಾಗಲೇ ಈ ಎಲ್ಲ ಸಮಸ್ಯೆಗಳ ಕುರಿತು, ವಿವಿಧ ಹಂತದಲ್ಲಿ 16ಕ್ಕೂ ಹೆಚ್ಚು ಸಭೆಗಳು ನಡೆದಿವೆ. ಆದರೆ ಈ ಸಮಸ್ಯೆಗಳು ಬಗೆಹರಿದಿಲ್ಲ. ಅಲ್ಲದೇ ನಿಶ್ಚಿತವಾಗಿ 15ಸಾವಿರ ರೂ.ಗೌರವಧನವನ್ನು ನಿಗದಿ ಮಾಡಬೇಕು. ಇದನ್ನು ಒಪ್ಪುವವರೆಗೂ ಮುಷ್ಕರ ಮುಂದುವರೆಯಲಿದೆ ಎಂದು ನಿರ್ಧರಿಸಿದ್ದಾರೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 46 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 108 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ