ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದರು.

ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಮೂಲಕ ಲಕ್ಷಾಂತರ ರಾಮಭಕ್ತರ ಐದು ದಶಕಗಳ ಕನಸು ನನಸಾಗಿದೆ. ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 6 ವರ್ಷಗಳ ಕಾಲ ಅಯೋಧ್ಯೆಗೆ ನರೇಂದ್ರ ಮೋದಿ ಅವರು ಭೇಟಿಕೊಟ್ಟಿರಲಿಲ್ಲ. ಇದೀಗ ತಮ್ಮ ಶಪತವನ್ನು ಈಡೇರಿಸಿಕೊಂಡಿದ್ದು, ಕೊಟ್ಟ ಭರವಸೆಯಂತೆಯೇ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ರಾಮಮಂದಿರದ ಶಿಲಾನ್ಯಾಸಕ್ಕೂ ಮೊದಲು ದೇವ ವೃಕ್ಷವೆಂದು ಕರೆಯಲ್ಪಡುವ ಕೃಷ್ಣಪ್ರಿಯ ಪಾರಿಜಾತ ಗಿಡವೊಂದನ್ನು ನೆಡುವ ಮೂಲಕ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ. ದೆಹಲಿಯಿಂದ ಅಯೋಧ್ಯೆಗೆ ಆಗಮಿಸುವ ಮೊದಲು ನರೇಂದ್ರ ಮೋದಿ ಅವರು ಹನುಮಾನ್ ಗಢಿ ದೇವಾಲಯಕ್ಕೆ ಭೇಟಿ ನೀಡಿದ್ರು, ನಂತರ ರಾಮಲಲ್ಲಾ ದೇಗುಲದಲ್ಲಿ ದರ್ಶನ ಪಡೆದಿದ್ದರು.

ಶ್ರೀ ರಾಮಚಂದ್ರ ಪರಿವರ್ತನೆಯ ಪ್ರತಿಪಾದಕ, ಶ್ರೀರಾಮನು ವಿರೋಧದ ಬದಲಾಗಿ ನಮಗೆ ಬೋಧ, ಶೋಧಗಳ ದಾರಿ ತೋರಿಸಿದ್ದಾನೆ. ಆತನ ಜೀವನಾದರ್ಶಗಳನ್ನು ಪಾಲಿಸುತ್ತ ನಾವೆಲ್ಲರೂ ಸ್ವಾವಲಂಬಿ ಭಾರತವನ್ನು ನಿರ್ಮಿಸೋಣವೆಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.

ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಯುಗಯುಗ ಗಳ ತನಕ ಈ ರಾಮಮಂದಿರ ಜಗತ್ತಿಗೆ ಮಾನವತೆಯ ಮಾರ್ಗದರ್ಶನ ಮಾಡಲಿದೆ. ಸದ್ಯ ನಾವೆಲ್ಲರೂ ಮುನ್ನಡೆಯಬೇಕು. ಭಾರತವೂ ಮುನ್ನಡೆಯ ಬೇಕು. ಸದ್ಯದ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮಾಡಬೇಕು. ಎಲ್ಲರಿಗೂ ಆರೋಗ್ಯ ನೀಡುವಂತೆ ಶ್ರೀರಾಮಚಂದ್ರ, ಸೀತಾದೇವಿಯರಲ್ಲಿ ಬೇಡಿಕೊಳ್ಳುತ್ತೇವೆ ಎಂದಿದ್ದಾರೆ.

ಅನೇಕತೆಯಲ್ಲಿ ಏಕತೆಯನ್ನು ತಂದುಕೊಡಬಲ್ಲವನು ರಾಮ. ಪ್ರತಿಯೊಂದು ಸಮುದಾಯ, ದೇಶದವರೂ ರಾಮ. ರಾಮಾಯಣದ ಜತೆಗೆ ನಂಟು ಹೊಂದಿದ್ದಾರೆ. ಭಾರತದಲ್ಲೇ ಒಂದೊಂದು ರಾಜ್ಯದಲ್ಲಿ ಒಂದೊಂದು ರಾಮಾಯಣದ ಕಥೆ ಸಿಗುತ್ತದೆ. ವಿದೇಶಗಳಲ್ಲೂ ರಾಮಕಥಾ ವಿವರಣೆ, ರಾಮಾಯಣದ ವಿವರಣೆ ಸಿಗುತ್ತದೆ. ನಮ್ಮ ಅರಿವು, ಜೀವನಾದರ್ಶಗಳು ಜಗತ್ತಿನಾದ್ಯಂತ ಹೇಗೆ ಪಸರಿಸಿದೆ ನೋಡಿ. ಅಯೋಧ್ಯಾ ಕೇಂದ್ರ ಸ್ಥಾನವಾಗಿ ಎಲ್ಲೆಲ್ಲಿ ರಾಮ, ರಾಮಾಯಣ ಪಸರಿಸಿಕೊಂಡಿದೆಯೋ ಅವೆಲ್ಲವನ್ನೂ ಜೋಡಿಸುವ ಸರ್ಕೀಟ್ ರಚನೆಯಾಗಲಿದೆ ಎಂದಿದ್ದಾರೆ.

ಇದೊಂದು ಐತಿಹಾಸಿಕ ದಿನ. ದೀರ್ಘಾವಧಿಗೆ ಈ ದಿನ ಸ್ಮರಣೀಯವಾಗಿ ಉಳಿಯಲಿದೆ. ರಾಮಮಂದಿರ ನಿರ್ಮಾಣವಾಗುವುದೆಂಬ ವಿಶ್ವಾಸವಿದೆ. ಅದೇ ರೀತಿ ಭಾರತದಲ್ಲಿ ರಾಮರಾಜ್ಯವೂ ಸ್ಥಾಪನೆಯಾಗಲಿದೆ ಎಂದ ಯೋಗ ಗುರು ಬಾಬಾ ರಾಮದೇವ್ ಅವರು ಹೇಳಿದ್ದಾರೆ.

ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್, ಉತ್ತರಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರವೇ ಶಿಲಾನ್ಯಾಸದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ