TRENDING
Next
Prev

‘ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಸಿಹಿಸುದ್ಧಿ ನೀಡಿದ ರಾಜ್ಯಸರ್ಕಾರ!

ಬೆಂಗಳೂರು: ‘ಬಗರ್ ಹುಕುಂ ಸಾಗುವಳಿಯನ್ನು ಸಕ್ರಮ ಮಾಡಿಕೊಳ್ಳಲು ರೈತರಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವವರು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ಎರಡು ವರ್ಷ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

‘ಕರ್ನಾಟಕ ಭೂ ಮಂಜೂರಾತಿ (ಎರಡನೇ ತಿದ್ದುಪಡಿ) ನಿಯಮಗಳು-2020’ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಭೂ ಸುಧಾರಣಾ ಕಾಯ್ದೆ ಅಡಿ ಅಕ್ರಮ ಭೂಮಿಯನ್ನು ಸಕ್ರಮಗೊಳಿಸಿಕೊಳ್ಳಲು ಈ ಹಿಂದೆ ರೈತರು ಹಾಕಿದ್ದ ಅರ್ಜಿಗಳು ತಿರಸ್ಕೃತಗೊಂಡಿದ್ದವು. ಇದೀಗ ಅಂತಹ ರೈತರಿಗೆ ಮತ್ತೊಂದು ಅವಕಾಶ ನೀಡಲಿದ್ದು, ಇದರಿಂದ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ .

READ ALSO