ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

ಬೆಳ್ತಂಗಡಿ (ದ.ಕ.): ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ. ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಆಶೀರ್ವಚನ ನೀಡಿದರು.

ಭಗವಂತನ ಸಾಕ್ಷಾತ್ಕಾರಕ್ಕೆ ಹಲವಾರು ಮಾರ್ಗಗಳಿದ್ದರೂ ಶ್ರದ್ಧಾಭಕ್ತಿಯಿಂದ ರಾಗ, ತಾಳ, ಲಯಬದ್ಧವಾಗಿ ಶಿಸ್ತಿನಿಂದ ಭಜನೆ ಹಾಡಿದರೆ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು. ನಾಡಿನ ಅನೇಕ ಸಾಧು-ಸಂತರು, ಮೀರಾಬಾಯಿಯಂತಹ ಸಾಧಕರು ಭಕ್ತಿಯಿಂದ ತಮ್ಮನ್ನು ತಾವು ಸಮರ್ಪಿಸಿಕೊಂಡು ದೇವರ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ. ಇಸ್ಕಾನ್‌ನವರು ವಿದೇಶಗಳಲ್ಲಿ ಕೂಡ ಭಜನೆ ಮೂಲಕ ದೇವರ ಅನುಗ್ರಹಕ್ಕೆ ಪಾತ್ರರಾಗುವ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಹೆಗ್ಗಡೆಯವರು ಜನಮಂಗಳ ಕಾರ್ಯ ಮೂಲಕ ರಾಜರ್ಷಿಯಾಗಿದ್ದಾರೆ ಎಂದರು.

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದರು. ಕಮ್ಮಟದಲ್ಲಿ ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ಸಂಪನ್ಮೂಲ ವ್ಯಕ್ತಿಗಳು ಮತ್ತು ಹಿರಿಯ ವಿದ್ವಾಂಸರನ್ನು ಹೆಗ್ಗಡೆ ಅಭಿನಂದಿಸಿದರು.

ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ವರದಿ ವಾಚಿಸಿ, ಕಮ್ಮಟದಲ್ಲಿ 107 ಪುರುಷರು ಮತ್ತು 105 ಮಹಿಳೆಯರು ಸೇರಿ ಒಟ್ಟು 212 ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ ಎಂದರು. ಬ್ರಹ್ಮಾವರದ ತಿಮ್ಮಪ್ಪ ಕರ್ಕೇರ ಮತ್ತು ಸುಳ್ಯದ ಶ್ರೀಲತಾ ಕಮ್ಮಟದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಶಿಬಿರಾರ್ಥಿಗಳಿಂದ ಸಾಮೂಹಿಕ ನೃತ್ಯ ಭಜನೆ ಮತ್ತು ಕುಣಿತ ಭಜನೆ ನಡೆಯಿತು.

ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ಮಾಜಿ ಎಂಎಲ್‌ಸಿ ಕೆ.ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ರತ್ನವರ್ಮ ಜೈನ್ ವಂದಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ನಿರೂಪಿಸಿದರು.

Spread the love
  • Related Posts

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳವು ಧಾರ್ಮಿಕ ಕ್ಷೇತ್ರವಾಗಿ ಮಾತ್ರವಲ್ಲದೆ ಸಮಾಜಮುಖಿ ಸೇವಾ ಕಾರ್ಯಗಳ ಮೂಲಕವೂ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದ ರೈತಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ…

    Spread the love

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಬೆಳ್ತಂಗಡಿ : ಪಶ್ಚಿಮ ಘಟ್ಟ ಪ್ರದೇಶದ ಜನರ ಕೃಷಿ ಹಾಗೂ ಜೀವನೋಪಾಯಕ್ಕೆ ಕಸ್ತೂರಿರಂಗನ್ ವರದಿಯಿಂದ ಉಂಟಾಗಿರುವ ಆತಂಕವನ್ನು ನಿವಾರಿಸಲು, ಭಾದಿತ ಗ್ರಾಮಗಳನ್ನು ಅರಣ್ಯ ಗ್ರಾಮ ಮತ್ತು ಕಂದಾಯ ಗ್ರಾಮಗಳಾಗಿ ಪ್ರತ್ಯೇಕಿಸುವಂತೆ ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಅವರು ಮುಖ್ಯಮಂತ್ರಿ ಡಿ.ಕೆ.…

    Spread the love

    You Missed

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 3 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 7 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 8 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 8 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 12 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    • By admin
    • September 28, 2026
    • 11 views
    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ