“ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಯು ಸಮಾಜದ ಏಕತೆ ಹಾಗೂ ಸಂಸ್ಕೃತಿ ಸಂರಕ್ಷಣೆಗೆ ಮಹತ್ವದ ಕೊಡುಗೆ ನೀಡುತ್ತದೆ

ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಬೇಕು. ಧಾರ್ಮಿಕ ಕೇಂದ್ರಗಳು ಕೇವಲ ಪೂಜೆ-ಪ್ರಾರ್ಥನೆಗೆ ಸೀಮಿತವಾಗದೆ, ಸಮಾಜದ ಒಳಿತಿಗಾಗಿ ಸೇವಾ ಕಾರ್ಯಗಳಿಗೆ ಪ್ರೇರಣೆಯಾಗಬೇಕು. ಕುಟುಂಬ ಮೌಲ್ಯಗಳು ಗಟ್ಟಿಯಾಗುವ ಮೂಲಕ ವೃದ್ಧಾಶ್ರಮಗಳ ಅವಶ್ಯಕತೆ ಕಡಿಮೆಯಾಗುವಂತಾಗಬೇಕು ಮಕ್ಕಳಿಗೆ ಭಜನೆ, ಧಾರ್ಮಿಕ ಮೌಲ್ಯಗಳು ಹಾಗೂ ನಮ್ಮ ಸಂಸ್ಕೃತಿಯ ಮಹತ್ವವನ್ನು ತಿಳಿಸುವ ಜವಾಬ್ದಾರಿ ಹಿರಿಯರ ಮೇಲಿದೆ. ಇಂದಿನ ಪೀಳಿಗೆಗೆ ಭಜನೆಯ ಬಗ್ಗೆ ಅರಿವು ಮೂಡಿಸುವ ಮೂಲಕ ಉತ್ತಮ ಸಂಸ್ಕಾರ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬಹುದು ಭಜನೆಯ ಮೂಲಕ ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು” ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

“ಕಟ್ಟಡಗಳು ಕೇವಲ ಸಾಂಕೇತಿಕವಾಗಿರದೆ, ಸಂಸ್ಕಾರ ತುಂಬುವ ಶ್ರದ್ಧಾ ಕೇಂದ್ರಗಳಾಗಬೇಕು. ಅಭಿವೃದ್ಧಿಯ ಜೊತೆಗೆ ಜ್ಞಾನ ಮತ್ತು ಮೌಲ್ಯಗಳ ಬೆಳವಣಿಗೆಯೂ ಅಗತ್ಯ” : ಡಾ. ಪ್ರದೀಪ್ ನಾವುರ

ಡಾ. ಪ್ರದೀಪ್ ನಾವುರ ಅವರು ಮಾತನಾಡುತ್ತಾ ಅಭಿವೃದ್ಧಿಯ ಜೊತೆಗೆ ಜ್ಞಾನವೂ ಅಭಿವೃದ್ಧಿಯಾಗಬೇಕು. ಸಮಾಜದ ಪ್ರಗತಿ ಕೇವಲ ಕಟ್ಟಡಗಳ ನಿರ್ಮಾಣದಿಂದ ಅಳೆಯಲಾಗುವುದಿಲ್ಲ. ನಿರ್ಮಾಣವಾಗುವ ಕಟ್ಟಡಗಳು ಕೇವಲ ಸಾಂಕೇತಿಕವಾಗಿರದೆ, ಸಂಸ್ಕಾರ ತುಂಬುವ ಶ್ರದ್ಧಾ ಕೇಂದ್ರಗಳಾಗಬೇಕು. ಇಂತಹ ಭಜನಾ ಮಂದಿರಗಳು ಮಕ್ಕಳಲ್ಲಿ ಮತ್ತು ಯುವಜನರಲ್ಲಿ ಧಾರ್ಮಿಕ ಪ್ರಜ್ಞೆ, ನೈತಿಕ ಮೌಲ್ಯಗಳು ಹಾಗೂ ಸಮಾಜಸೇವೆಯ ಮನೋಭಾವ ಬೆಳೆಸುವ ಕೇಂದ್ರಗಳಾಗಿ ಪರಿವರ್ತನೆಯಾಗಬೇಕು ಎಂದು ಶುಭಹಾರೈಸಿದರು.

oplus_18

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ ಪೂಜಾ ಕೈಂಕರ್ಯಗಳು ನಡೆದವು.

ಕಾರ್ಯಕ್ರಮದಲ್ಲಿ ಜಯಂತ ಗೌಡ ಗುರಿಪಳ್ಳ, ಹರೀಶ್ ಸಾಲಿಯಾನ್ ಮೊರ್ತಾಜೆ ಅಧ್ಯಕ್ಷರು, ಸಿಎ ಬ್ಯಾಂಕ್, ಸುದರ್ಶನ್ ಜೈನ್ ಬೆಳ್ಳೂರು ಗುತ್ತು, ವಸಂತ ಗೌಡ ಕಲ್ಲಾಜೆ (ಮಾಜಿ ಉಪಾಧ್ಯಕ್ಷರು, ಸಿಎ ಬ್ಯಾಂಕ್), ಆನಂದ ಗೌಡ ಬರಮೇಲು (ಉಪಾಧ್ಯಕ್ಷರು, ಸಿಎ ಬ್ಯಾಂಕ್), ಭರತ್ ಹಾನಿಬೆಟ್ಟು, ಗ್ರಾಮಪಂಚಾಯತ್ ಮಾಜಿ ಸದಸ್ಯರುಗಳಾದ, ಸೂರಜ್ ವಳಂಭ್ರ, ಅಶೋಕ್ ಕುಮಾರ್, ರತ್ನಾವತಿ ಕಾನರ್ಪ, ಸಾವಿತ್ರಿ, ಬೇಬಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಚಾಮುಂಡೇಶ್ವರಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಧಾರ್ಮಿಕ ವಿಧಿವಿಧಾನಗಳನ್ನು ಆನಂದ ಭಟ್ ಪುರೋಹಿತರು ನೆರವೇರಿಸಿದರು. ಗ್ರಾಮಸ್ಥರು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕೊನೆಯಲ್ಲಿ ಆಯೋಜಕರ ವತಿಯಿಂದ ಅತಿಥಿಗಳನ್ನು ಸನ್ಮಾನಿಸಿ, ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ