ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಕೈಗೊಂಡಿದ್ದ ರಾಸುವಿನ ಭ್ರೂಣ ವರ್ಗಾವಣೆ ಕಾರ್ಯಕ್ರಮದ ಪ್ರಥಮ ಪ್ರಯೋಗ ಯಶಸ್ವಿಯಾಗಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 11 2025 ರಂದು ದ ಕ ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆರವರು ಚಾಲನೆ ನೀಡಿದ್ದರು.

ಆ ಪ್ರಯುಕ್ತ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ರೇವತಿ ಗಂಗಯ್ಯ ಪೆಲತ್ತಿ ಮಾರು ಅವರ ಮನೆಯಲ್ಲಿ 2025ರ ಅಕ್ಟೋಬರ್ 12ರಂದು ರಾಸುವಿನ ಭ್ರೂಣ ವರ್ಗಾವಣೆ ಮಾಡಲಾಗಿತ್ತು. ಯಶಸ್ವಿ ಗರ್ಭಧಾರಣೆಯ ಬಳಿಕ 2026ರ ಜೂನ್ 25ರಂದು ಆರೋಗ್ಯವಂತ ಜರ್ಸಿ ಹೆಣ್ಣು ಕರುವಿನ ಜನನವಾಗಿದೆ. ಇದು ಜಿಲ್ಲೆಯ ಹೈನುಗಾರಿಕೆ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಿದೆ.

ಈ ಕಾರ್ಯಕ್ರಮವು ಉಪ್ಪಿನಂಗಡಿ ಶಿಬಿರ ಕಚೇರಿಯ ಪಶುವೈದ್ಯರ ಮೇಲುಸ್ತುವಾರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಭ್ರೂಣವರ್ಗಾವಣೆ ಕಾರ್ಯಕ್ರಮದ ಒಟ್ಟು ವೆಚ್ಚ ₹21,000 ಆಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ – ₹5,000
ಕರ್ನಾಟಕ ಹಾಲು ಮಹಾಮಂಡಳಿ – ₹10,000
ಕೇಂದ್ರ ಸರ್ಕಾರದ ರಾಷ್ಟ್ರೀಯ ಗೋಕುಲ ಮಿಷನ್ – ₹5,000
ಫಲಾನುಭವಿ ರೈತರಿಂದ – ₹1,000 ಒಟ್ಟು ₹21,000 ವೆಚ್ಚದ ಈ ಯೋಜನೆಯಲ್ಲಿ ಹಸುವಿನ ಗರ್ಭಧಾರಣೆ ಮೂರು ತಿಂಗಳು ಯಶಸ್ವಿಯಾಗಿ ದೃಢಪಟ್ಟ ನಂತರ ಮಾತ್ರ ಫಲಾನುಭವಿ ರೈತರು ತಮ್ಮ ಪಾಲಿನ ₹1,000 ಪಾವತಿಸುತ್ತಾರೆ. ಒಟ್ಟು 25 ರಾಸುಗಳ ಮೇಲೆ ಪ್ರಯೋಗ ನಡೆದಿದ್ದು ಇದರಲ್ಲಿ 5 ಯಶಸ್ವಿಯಾಗಿರುತ್ತದೆ.

ಈ ಯೋಜನೆಯು ಉತ್ತಮ ತಳಿಯ ಹಸುಗಳ ಅಭಿವೃದ್ಧಿ, ಹಾಲು ಉತ್ಪಾದನೆ ಹೆಚ್ಚಳ ಹಾಗೂ ರೈತರ ಆದಾಯ ವೃದ್ಧಿಗೆ ನೆರವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಗೆ ಹೊಸ ಮೈಲಿಗಲ್ಲಾಗಿದೆ.

Spread the love
  • Related Posts

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಬೆಳ್ತಂಗಡಿ : ಪಶ್ಚಿಮ ಘಟ್ಟ ಪ್ರದೇಶದ ಜನರ ಕೃಷಿ ಹಾಗೂ ಜೀವನೋಪಾಯಕ್ಕೆ ಕಸ್ತೂರಿರಂಗನ್ ವರದಿಯಿಂದ ಉಂಟಾಗಿರುವ ಆತಂಕವನ್ನು ನಿವಾರಿಸಲು, ಭಾದಿತ ಗ್ರಾಮಗಳನ್ನು ಅರಣ್ಯ ಗ್ರಾಮ ಮತ್ತು ಕಂದಾಯ ಗ್ರಾಮಗಳಾಗಿ ಪ್ರತ್ಯೇಕಿಸುವಂತೆ ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಅವರು ಮುಖ್ಯಮಂತ್ರಿ ಡಿ.ಕೆ.…

    Spread the love

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಧರ್ಮಸ್ಥಳ: ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ನಾವು ಮನೆಯಲ್ಲಿ ಪರಿಶುದ್ಧ ತನು, ಮನ ಮತ್ತು ನಾಲಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಸೋಮವಾರ…

    Spread the love

    You Missed

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 3 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 9 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    • By admin
    • September 28, 2026
    • 9 views
    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 16 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 15 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 11 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ