ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ (ಆ.19ರವರೆಗೆ) ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಈಗಾಗಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಅದರ ಪ್ರಭಾವದಿಂದ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನಾದ್ಯಂತ ಭಾರಿ ಮಳೆ ಬೀಳುವ ಸಂಭವವಿದೆ. ಎಲ್ಲ ಕಡೆಗಳಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಆದ್ದರಿಂದ 16 ರಂದು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.