ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ : ಸಚಿವ ಲಕ್ಷ್ಮಣ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ  ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್ ಬಸ್ ಗಳನ್ನು ಲೀಸ್ ಗೆ  ಪಡೆದು ಓಡಾಟ ಆರಂಭಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು , ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ಆರಂಭಗೊಳ್ಳಲಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಅವರು ಭಾನುವಾರ, ಉಡುಪಿಯಲ್ಲಿ, 395 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ  ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರವು ಮಾಲಿನ್ಯ ಹೆಚ್ಚಿರುವ ದೇಶದ ಪ್ರಮುಖ ನಗರಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಎಲೆಕ್ಟ್ರಿಕ್ ಬಸ್ ಗಳ ಬಳಕೆ ಮಾಡುವ ಕುರಿತಂತೆ ಪ್ರೋತ್ಸಾಹ ನೀಡುತ್ತಿದ್ದು, ಇದಕ್ಕಗಿ ಬಸ್ ಖರೀದಿಗೆ 55 ಲಕ್ಷ ರೂ ಸಬ್ಸಿಡಿ ನೀಡಲಿದೆ, ಅದೇ ರೀತಿ ರಾಜ್ಯವೂ ಸಹ ಪ್ರತೀ ಬಸ್ ಗೆ 33 ಲಕ್ಷ ರೂ ಸಬ್ಸಿಡಿ ನೀಡಲಿದ್ದು, ಒಂದು ಎಲೆಕ್ಟ್ರಿಕ್ ಬಸ್ ನ ಬೆಲೆ ರೂ.2 ಕೋಟಿ ಅಗಲಿದ್ದು, ಒಟ್ಟು 88 ಲಕ್ಷ ರೂ ಗಳ ಸಬ್ಸಿಡಿ ದೊರೆಯಲಿದೆ,  ಇದರಿಂದ ಇಂದನ ವೆಚ್ಚ ತಗ್ಗಿಸಲು ಹಾಗೂ ಮಾಲಿನ್ಯ ನಿಯಂತ್ರಣ ಸಾಧ್ಯವಾಗಲಿದ್ದು, ಲಾಭದಾಯಕ ಸಹ ಆಗಲಿದೆ. ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ 350 ಬಸ್ ಗಳನ್ನು ಲೀಸ್ ಗೆ ಪಡೆದು, ಪ್ರತೀ ಕಿಮೀ ಹೂಡಿಕೆದಾರರಿಗೆ ನಿಗಧಿತ ದರ ನೀಡುವ ಒಪ್ಪಂದದಲ್ಲಿ ಆರಂಭಿಸಲಿದ್ದು, ಮುಂದೆ ಇದನ್ನು ರಾಜ್ಯದ ಎಲ್ಲಾ ನಗರ ಸಾರಿಗೆಯಲ್ಲಿ ಬಳಸಿಕೊಳ್ಳಲಾಗುವುದು ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು.

 ರಾಜ್ಯದ ಸಾರಿಗೆ ನೌಕರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿದ್ದು, ಅವರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಇಂಧನದಲ್ಲಿ ಶೇ.20 ರಷ್ಟು ಇಥೆನಾಲ್ ಮಿಶ್ರಣ  ಮಾಡುವುದರಿಂದ ಬಸ್ ಗಳ  ಇಂಧನ ವೆಚ್ಚ ತಗ್ಗಿಸಲು ಸಾಧ್ಯವಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಕೊವೀಡ್ ಲಾಕ್ ಡೌನ್ ಸಮಯದಲ್ಲಿ ಸಾರಿಗೆ ಸಂಚಾರ ಇಲ್ಲದಿದ್ದರೂ  ಸಹ ಸಾರಿಗೆ ನೌಕರರಿಗೆ ವೇತನ ನೀಡಲಾಗಿದೆ, ಇದಕ್ಕಾಗಿ ಸರ್ಕಾರದಿಂದ 2 ತಿಂಗಳ ವೇತನಕ್ಕಾಗಿ 650 ಕೋಟಿ ರೂ ನೆರವು ಪಡೆಯಲಾಗಿದೆ, ರಾಜ್ಯದಲ್ಲಿ ಎಲೆಕ್ಟಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಂತಹ ವಾಹನಗಳ ರಸ್ತೆ ತೆರಿಗೆಯನ್ನು ಸಂಪೂರ್ಣ ಮನ್ನಾ ಮಾಡಲಾಗುತ್ತಿದೆ ರಾಜ್ಯದಲ್ಲಿ ಪ್ರಸ್ತುತ 26000 ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳಿವೆ ಎಂದು ಸಚಿವರು ಹೇಳಿದರು.

 ಉಡುಪಿಯ ಬನ್ನಂಜೆಯಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ಹೆಸರು ಇಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು, ಜಿಲ್ಲೆಯ ಟ್ಯಾಕ್ಸಿ ಮಾಲೀಕರು ನೀಡಿರುವ ಮನವಿಗಳ ಬಗ್ಗೆ ಅಧಿವೇಶನ ಸಂದರ್ಭದಲ್ಲಿ ಚರ್ಚಿಸಿ ಪರಿಹಾರ ಒದಗಿಸಲಾಗುವುದು  ಎಂದು ಉಪ ಮುಖ್ಯಮಂತ್ರಿ ಹೇಳಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

    Spread the love

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 63 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 22 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 63 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 86 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ