
ಬೆಂಗಳೂರು: ಬೆಂಗಳೂರಿನಲ್ಲಿ ಮನೆ ಮನೆಗೆ ನುಗ್ಗಿ ಮುಸ್ಲಿಂ ಯುವಕರು ದಾಂಧಲೆ ನಡೆಸುತ್ತಿದ್ದು, ಪರಿಸ್ಥಿತಿ ಕೈ ಮೀರಿ ಹೋಗಿದೆ.
ಶಾಸಕ ಅಖಂಡ ಶ್ರೀನಿವಾಸ್ ಶೆಟ್ಟಿ ಅವರ ಮನೆಗೆ ಬೆಂಕಿ ಹಚ್ಚಲಾಗಿದ್ದು, ಖಾಸಗಿ ವಾಹಿನಿಯ ವಾಹನ ಜಖಂ ಗೊಳಿಸಿ ವರದಿಗೆ ತೆರಳಿದ ಪತ್ರಕರ್ತರ ಮೇಲೆ ಹಲ್ಲೆ ಮಾಡಿ ಕ್ಯಾಮರಾ ಪುಡಿಗೈದು, ಮನೆ ಮನೆಗೆ ನುಗ್ಗಿ ಮುಸ್ಲಿಂ ಸಮುದಾಯದ ಯುವಕರು ಪುಂಡಾಟ ನಡೆಸಿದ್ದು, ಕಾವಲ ಬೈರಸಂದ್ರ ಹಾಗೂ ಕೆಜಿ ಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪ್ರವಾದಿ ಪೈಗಂಬರ್ ವಿರುದ್ದ ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡ ಶ್ರೀನಿವಾಸರಾಜು ಅವರ ಮನೆ, ಕಚೇರಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಂಗಳೂರಿನ ಕಾಲವ್ ಬೈರಸಂದ್ರದಲ್ಲಿ ನಡೆದಿದೆ, ಹದಿನೈದಕ್ಕೆ ಹೆಚ್ಚು ಕಿಡಿಗೇಡಿಗಳಿಂದ ಶಾಸಕರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಶಾಸಕ ಅಖಂಡ ಶ್ರೀನಿವಾಸರಾಜು ಅವರ ಸೋದರಳಿಯ ನವೀನ್ ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ನೂರಾರು ಜನರು ನಗರದ ಕೆಜಿ ಹಳ್ಳಿ ಪೋಲೀಸ್ ಠಾಣೆ ಎದುರು ಜಮಾಯಿಸಿದ್ದು ನವೀನ್ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಪುಲಕೇಶಿನಗರದ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ, ಸಧ್ಯ ಜನರನ್ನು ಸಮಾಧಾನಪಡಿಸಲು ಶಾಸಕ ಜಮೀರ್ ಅಹಮದ್ ಖಾನ್ ಸಹ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
ಖಾತೆ ಹ್ಯಾಕ್?
ನನ್ನ ಫೇಸ್‌ಬುಕ್ ಖಾತೆ ಹ್ಯಾಕ್ ಆಗಿದೆ. ಯಾರೋ ದುಷ್ಕರ್ಮಿಗಳು ನನ್ನ ಖಾತೆ ಹ್ಯಾಕ್ ಮಾಡಿ ಕೆಟ್ಟ ಪೋಸ್ಟ್ ಹಾಕಿದ್ದಾರೆ. ದುಷ್ಕರ್ಮಿಗಳ ವಿರುದ್ಧ ನಾನು ದೂರು ದಾಖಲಿಸುತ್ತೇನೆ ಎಂದು ಶಾಸಕರ ಸಂಬಂಧಿ ನವೀನ್ ಪೋಸ್ಟ್ ಮಾಡಿದ್ದಾರೆ.
ಇನ್ನು ಪರಿಸ್ಥಿತಿ ನಿಯಂತ್ರಿಸಲು ಇದಾಗಲೇ ಪೊಲೀಸ್ ಠಾಣಾ ಆವರಣದಲ್ಲಿ ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದ್ದು ಪೂರ್ವ ವಿಭಾಗದ ಎಲ್ಲಾ ಪೋಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ತಕ್ಷಣ ಕೆಜಿ ಹಳ್ಳಿ ಠಾಣೆಗೆ ಆಗಮಿಸಲು ಹಿರಿಯ ಪೋಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ.
ಆರೋಪಿ ಬಂಧನ?
ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.