ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ. ಪಿ.ಎಸ್ ಹರ್ಷ ಅಧಿಕಾರ ಸ್ವೀಕಾರ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ .ಪಿ. ಎಸ್ ಹರ್ಷರವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಈವರೆಗೆ ಆಯುಕ್ತರಾಗಿದ್ದ ಎಸ್ ಎನ್ ಸಿದ್ದರಾಮಪ್ಪ ಅವರು ಬೆಂಗಳೂರಿನ ಸಿ ಐ ಡಿ ಯ ಆರ್ಥಿಕ ಅಪರಾಧಗಳ ವಿಭಾಗದ ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

READ ALSO