ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ.
ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ. ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು,
ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ