ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ನಾಯಕ್ ಇವರನ್ನು ಬೆಳ್ತಂಗಡಿ ತಾಲೂಕು ಬಂಟರ ಸಂಘದ ವತಿಯಿಂದ ಅಭಿನಂದಿಸಿ ತಾಲೂಕು ಬಂಟ ಸಮಾಜದ ಪರವಾಗಿ ಗೌರವಿಸಲಾಯಿತು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಬೆಳ್ತಂಗಡಿ ಬಂಟ ಸಮಾಜವು ಸಾಮಾಜಿಕವಾಗಿ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ತುಂಬಾ ಸಂತೋಷದ ವಿಚಾರ . ಮುಂದೆ ಇಂತಹ ಕಾರ್ಯಕ್ರಮಗಳಿಗೆ ನಾನು ನಿಮ್ಮೊಂದಿಗೆ ಕೈಜೋಡಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಬಂಟರ ಸಂಘದ ಆಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ರಾಜು ಶೆಟ್ಟಿ ಬೆಂಗೆತ್ಯಾರ್, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಕಲ್ಯಾಣ ನಿಧಿ ಸಂಚಾಲಕ ಜಯಂತ ಶೆಟ್ಟಿ ಕುಂಠಿನಿ, ಸಾಂಸ್ಕ್ರತಿಕ ಸಂಚಾಲಕರುಗಳಾದ ರಘರಾಮ್ ಶೆಟ್ಟಿ “ಸಾಧನ” ಉಜಿರೆ, ಉಮೇಶ್ ಶೆಟ್ಟಿ “ಶ್ರೀದುರ್ಗಾ” ಉಜಿರೆ, ಸಂಘಟನಾ ಕಾರ್ಯದರ್ಶಿ ಜಯರಾಮ್ ಭಂಡಾರಿ ಧರ್ಮಸ್ಥಳ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ ಸವಣಾಲ್, ಕ್ರೀಡಾ ಸಂಚಾಲಕ ರಾಜೇಶ್ ಶೆಟ್ಟಿ ಲಾಯ್ಲ, ಯುವ ವಿಭಾಗ ಸಂಚಾಲಕ ವಸಂತ ಶೆಟ್ಟಿ “ಶ್ರದ್ಧಾ”, ಜತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯ್ಲ, ಹಾಗೂ ಪ್ರಸಾದ್ ಶೆಟ್ಟಿ ಎಣಿಂಜೆ ಉಪಸ್ಥಿತರಿದ್ದರು.