ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

ಬಂಟ್ವಾಳ : ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ.

ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ

Spread the love
  • Related Posts

    ಚಾಲಕನಿ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಟಿ.ಟಿ ವಾಹನ

    ಬೆಳ್ತಂಗಡಿ:ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವು ಮನೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಚೆಕ್‌ ಪೋಸ್ಟ್ ಬಳಿ ನ.28 ರಂದು ಸಂಜೆ ನಡೆದಿದೆ. ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ…

    Spread the love

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ

    ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಲೇಜಿನಲ್ಲಿ ಸ್ಟೂಡೆಂಟ್ ವೆಲ್ಫೇರ್ ಆಫೀಸರ್ (Student Welfare Officer) ಹಾಗೂ ಪುರುಷ ಮತ್ತು ಮಹಿಳಾ ವಾರ್ಡನ್ (Male & Female Wardens) ಸೆಕ್ಯೂರಿಟಿ…

    Spread the love

    You Missed

    ಚಾಲಕನಿ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಟಿ.ಟಿ ವಾಹನ

    • By admin
    • November 28, 2026
    • 2 views
    ಚಾಲಕನಿ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಟಿ.ಟಿ ವಾಹನ

    ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!

    • By admin
    • November 24, 2026
    • 10 views
    ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!

    ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ – ದಿಶಾನ್ ಕ್ಯಾಟರರ್ಸ್

    • By admin
    • November 21, 2026
    • 11 views
    ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ

    • By admin
    • November 21, 2026
    • 11 views
    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ

    ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ

    • By admin
    • November 19, 2026
    • 12 views
    ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    • By admin
    • November 17, 2026
    • 20 views
    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ