ಕೊಲ್ಕತ್ತಾ : ಈಗಾಗಲೇ ಎದೆನೋವು ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ, ಗುಣಮುಖರಾಗಿ ಆಸ್ಪತ್ರೆಯಿಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ, ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತಂತೆ ಸೌಮ್ಯ ದಾಸ್ ಎಂಬುದವರು ಟ್ವಿಟ್ ಮಾಡಿದ್ದು, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದಾಗಿ ಅವರನ್ನು ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅವರ ಕುಟುಂಬದ ಮೂಲಗಳು ತಿಳಿಸಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.