ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರಿಗೆ ಹೃದಯಾಘಾತವಾಗಿದ್ದು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಸಂಜೆಯೊಳಗೆ ಅವರಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ