ಬೆಳಗಾವಿ ಜಿಲ್ಲಾಸ್ಫತ್ರೆಯಲ್ಲಿ ಕೋವಿಡ್ ಸೋಂಕಿತ ಮೃತಪಟ್ಟ ಹಿನ್ನೆಲೆ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಬೆಳಗಾವಿ: ಕೊವಿಡ್ ವೈರಸ್ ಸೊಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಆಕ್ರೋಷಗೊಂಡು ಆಸ್ಪತ್ರೆಯ ಆಂಬುಲೆನ್ಸ್ ಗೆ ಬೆಂಕಿ ಇಟ್ಟ ಘಟನೆ ವರದಿಯಾಗಿದೆ.

ಕೊರೋನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಈ ಅನಾಗರಿಕ ಘಟನೆಯಿಂದ ಕುಂದಾನಗರಿ ಜನ ಬೆಚ್ಚಿ ಬಿದ್ದಿದ್ದಾರೆ.

ಬೆಳಗಾವಿ ಬಿಮ್ಸ ಆಸ್ಪತ್ರೆಯ ಕೋವಿಡ್ ಐಸಿಯು ವಾರ್ಡನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಹಿನ್ನೆಲೆ ಆಕ್ರೋಷಗೊಂಡ ಸಂಬಂಧಿಕರು ಈ ರೀತಿ ಗೂಂಡಾ ವರ್ತನೆ ತೋರಿದ್ದಾರೆ. ರೋಗಿಯ 10ಕ್ಕೂ ಹೆಚ್ಚು ಸಂಬಂಧಿಕರು ಬಿಮ್ಸ ಕೋವಿಡ್ ವಾರ್ಡ ಮುಂದೆ ನಿಂತಿದ್ದ ಆಂಬುಲೆನ್ಸಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದ್ದಾರೆ. ನೋಡ ನೋಡುತ್ತಿದ್ದಂತೆ ಆಂಬುಲೆನ್ಸಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬರುವಷ್ಠರಲ್ಲಿ ಆಂಬುಲೆನ್ಸ್ ಸುಟ್ಟು ಕರಕಲಾಗಿದೆ.

ಅಷ್ಟೇ ಅಲ್ಲದೇ ಐಸಿಯು ವಾರ್ಡನಲ್ಲಿದ್ದ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆಗೂ ದುಷ್ಕರ್ಮಿಗಳು ಮುಂದಾಗಿದ್ದರು. ಪೊಲೀಸ್ ವಾಹನ, ಕಾರುಗಳ ಗಾಜನ್ನು ಪುಡಿ ಪುಡಿ ಮಾಡಿ ತಮ್ಮ ದರ್ಪ ಮೆರೆದಿದ್ದಾರೆ.

ಗಲಾಟೆ ಆರಂಭವಾಗಿ ಬೆಂಕಿ ಇಡಲು ಬರುತಿದ್ದಂತೆಯೇ ತಕ್ಷಣವೇ ಆಂಬ್ಯುಲೆನ್ಸಲ್ಲಿದ್ದ ಚಾಲಕ, ನರ್ಸ್, ಕೊರೊನಾ ಆಸ್ಪತ್ರೆ ಒಳಗೆ ಓಡಿ ಹೋಗಿದ್ದಾರೆ.

ನೂರಕ್ಕೂ ಹೆಚ್ಚು ಜನರ ಗುಂಪು ಏಕಾಏಕಿ ಆಸ್ಪತ್ರೆಯ ಐ.ಸಿ.ಯು ಗೆ ನುಗ್ಗಿ ದಾಂದಲೆ ನಡೆಸಿದ್ದು ಈ ಕೃತ್ಯ ಪೂರ್ವನಿಯೋಜಿತ ಕೃತ್ಯವೇ ಎಂಬ ಪ್ರಶ್ನೆ ಕಾಡುತ್ತಿದೆ?. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ, ಪೊಲೀಸ್ ಕಮಿಷನರ್ ಡಾ.ಕೆ.ತ್ಯಾಗರಾಜ, ಜಿ.ಪಂ ಸಿಇಒ ರಾಜೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ಇದೀಗ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ