ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ ಹಾಗೂ ಪಂಚಾಯತ್ ನಲ್ಲಿ ಮಕ್ಕಳಿಗಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಇವರು ಮಾತನಾಡಿ ಮಕ್ಕಳ ಹಕ್ಕುಗಳು ಮತ್ತು ಕರ್ತವ್ಯಗಳು, ಬಾಲ ಕಾರ್ಮಿಕರು, ಬಾಲ್ಯ ವಿವಾಹ, ಪೋಕ್ಸ ಕಾಯ್ದೆಯ ಬಗ್ಗೆ ಸವಿವರವಾಗಿ ತಿಳಿಸಿದರು. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಡ್ಯಾನಿ ಮಕ್ಕಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ವಿವರಿಸಿದರು.

ಅಧ್ಯಕ್ಷತೆಯನ್ನು ಬೆಳಾಲು ಶ್ರೀ ಧ. ಮ. ಪ್ರೌಢ ಶಾಲಾ ವಿದ್ಯಾರ್ಥಿನಿ ನೇತ್ರಾವತಿ ಇವರು ವಹಿಸಿಕೊಂಡರು . ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲ ಹೋರಾಡಬೇಕು ಎಂದು ತಿಳಿಸಿದರು. ಗ್ರಾಮಸಭೆಯಲ್ಲಿ ಜಿಲ್ಲೆ, ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪಂಚಾಯಿತಿನ ಉಪಾಧ್ಯಕ್ಷೆ ಗೀತಾ ,ಎಸ್ ಡಿ ಎಂ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಜಯರಾಮ ಮಯ್ಯ, ಶಿಕ್ಷಕ ಕಿರಣ್ ಜೈನ್, ಮಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಯೋಗೀಶ್ ಹೆಚ್. ಆರ್., ಕೊಲ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕರಿಯಣ್ಣ, ಶ್ರೀ ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುಲೋಚನ , ಪೆರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರವಲ್ಲಿಕ ,ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ತನುಜ ಉಪಸ್ಥಿತರಿದ್ದರು.ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೊಲ್ಪಾಡಿಯ ವಿದ್ಯಾರ್ಥಿನಿ ತನ್ವಿ ಸ್ವಾಗತಿಸಿ,ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅಫಾನ್ ಧನ್ಯವಾದ ಸಲ್ಲಿಸಿದರು. ಮಾಯಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಶಶಿಧರ್ ನಿರೂಪಿಸಿದರು.

Spread the love
  • Related Posts

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 20 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 62 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 82 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ