
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ ಹೇಮಾವತಿ.ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶ್ರೀ.ಧ.ಮಂ.ಕಾಲೇಜು(ಸ್ವಾಯತ್ತ) ಉಜಿರೆ, ಶ್ರೀ.ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಶ್ರೀ.ಧ.ಮಂ.ಸ್ಪೋರ್ಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ(ರಿ) ಬೆಳ್ತಂಗಡಿ, ವ್ಯವಸ್ಥಾಪನಾ ಸಮಿತಿ ಅನಂತಪದ್ಮನಾಭ ದೇವಸ್ಥಾನ, ಅನಂತೋಡಿ ಬೆಳಾಲು, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ಉಜಿರೆ ಇದರ ನೇತೃತ್ವದಲ್ಲಿ “ಯುವ ಸಿರಿ ರೈತ ಭಾರತದ ಐಸಿರಿ” ಎಂಬ ಪರಿಕಲ್ಪನೆಯೊಂದಿಗೆ ಸುಮಾರು 1000 ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ‘ಭತ್ತ ಕಟಾವು ಕಾರ್ಯಕ್ರಮ’ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಅನಂತೋಡಿ ದೇವಸ್ಥಾನದ ಬಳಿಯ ಗದ್ದೆಯಲ್ಲಿ 9-2-2025 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃ ಶ್ರೀ ಹೇಮಾವತಿ.ವಿ.ಹೆಗ್ಗಡೆ, ಶ್ರೀಮತಿ ಸುಪ್ರೀಯಾ ಹರ್ಷೇಂದ್ರ ಕುಮಾರ್, ಸೋನಿಯಾ ಯಶೋವರ್ಮ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ. ನಾಯಕ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಅಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಪ್ರತಾಪ ಲಿಂಗಯ್ಯ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್, ಶ್ರೀ.ಧ.ಗ್ರಾ.ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್.ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಬಿ.ಎ.ಕುಮಾರ್ ಹೆಗ್ಡೆ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ,ಉಜಿರೆ ಕೇಂದ್ರ ಕಚೇರಿಯ ರುಡ್ ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್, ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಅಧ್ಯಕ್ಷ ಬಿ.ಕೆ.ಧನಂಜಯ ರಾವ್, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಸಂಚಾಲಕ ಲಕ್ಷ್ಮೀ ಇಂಡಸ್ಟ್ರೀಸ್ ಮಾಲೀಕ ಮೋಹನ್ ಕುಮಾರ್, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಆಡಳಿತಾಧಿಕಾರಿ ಜನಾರ್ದನ್, ಶ್ರೀ.ಮಂ.ಕಾಲೇಜು ರಾ.ಸೇ.ಯೋ.ಘಟಕದ ಯೋಜನಾಧಿಕಾರಿ ಡಾ.ಮಹೇಶ್ ಕುಮಾರ್.ಶೆಟ್ಟಿ.ಎಚ್, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೇ ವಿದ್ಯಾ ಶ್ರೀನಿವಾಸ ಗೌಡ ಹಾಗೂ ಮತ್ತಿತರರು ಉಪಸ್ಥಿತಿಯಿದ್ದರು.


