ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಆಚರಣಾ ಸಮಿತಿಯ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಆಚರಿಸುವ ಬಗ್ಗೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ ಇಂದು ಎಸ್.ಡಿ.ಎಂ ಸಭಾಂಗಣದಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಯಾವ ರೀತಿ ಆಚರಿಸಬಹುದು ಎಂಬ ಬಗ್ಗೆ ಸಮಿತಿಯವರು ಸಲಹೆ ನೀಡುವಂತೆ ತಿಳಿಸಿದರು.

READ ALSO

ಈ ವರ್ಷ ಅಷ್ಟಮಿಯನ್ನು ಗ್ರಾಮದ ದೇವಸ್ಥಾನದಲ್ಲಿ ಭಜನೆ ಮತ್ತು ಪೂಜೆ ಮಾಡಿ ಮುಗಿಸುವುದು, ಗಣೇಶೋತ್ಸವವನ್ನು ಗಣಹೋಮ ಮಾಡಿ ಒಂದು ದಿನದಲ್ಲಿ ಮುಗಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ತಾಲೂಕಿನ ವಿವಿಧ ಗಣೇಶೋತ್ಸವ ಸಮಿತಿಗಳ ಅಧ್ಯಕ್ಷರು ಈ ವರ್ಷ ತಮ್ಮ ಸಮಿತಿಯಿಂದ ಯಾವ ರೀತಿಯ ಆಚರಣೆ ನಡೆಯುತ್ತದೆ ಎಂಬ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಸಭೆಯಲ್ಲಿ ಇ.ಒ ಜಯರಾಮ್, ಜಿ.ಪಂ ಸದಸ್ಯರಾದ ಕೊರಗಪ್ಪ ನಾಯ್ಕ, ಸೌಮ್ಯಲತಾ, ತಾ.ಪಂ ಉಪಾಧ್ಯಕ್ಷೆ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ್ ಕಲ್ಮಂಜ, ಮುಖ್ಯಾಧಿಕಾರಿ ಸುಧಾಕರ್, ಸಕ೯ಲ್ ಇನ್ಸ್ ಪೆಕ್ಟರ್ ಸಂದೇಶ್ ಉಪಸ್ಥಿತರಿದ್ದರು.