ಬೇಲೂರು : ಬೇಲೂರು ತಾಲೂಕಿನ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು-ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ ಸಂಚಾರ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೇಲೂರು ತಾಲೂಕಿನ ಗೌತವಳ್ಳಿ ಗ್ರಾಮದ ಎಬಿಸಿ ಚಂದ್ರೇಗೌಡರವರ ಕಾಫಿ ತೋಟದಲ್ಲಿ ಬೆಳಿಗ್ಗೆ ಕೂಲಿ ಕಾರ್ಮಿಕರು ಸುಣ್ಣ ಚೆಲ್ಲುವ ಕೆಲಸದಲ್ಲಿ ತೊಡಗಿದ್ದಾಗ, ತೋಟದೊಳಗಿನಿಂದ ಏಕಾಏಕಿ ಎರಡು ಚಿರತೆಗಳು ದಾಳಿ ನಡೆಸಿವೆ. ಈ ದಾಳಿಯಲ್ಲಿ ಸುಲ್ತಾನ ಹಾಗೂ ಸಬೀನಾ ಎಂಬ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿರತೆಗಳ ದಾಳಿಯಿಂದ ಕಾರ್ಮಿಕರು ನೆಲಕ್ಕೆ ಬಿದ್ದಿದ್ದು, ಅವರ ಕೂಗು ಕೇಳಿ ಇತರ ಕಾರ್ಮಿಕರು ಧಾವಿಸಿ ಬಂದು ಚಿರತೆಗಳನ್ನು ಓಡಿಸಿದ್ದಾರೆ ಎನ್ನಲಾಗಿದೆ.





