ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

ಬೆಳ್ತಂಗಡಿ, ಆ. 6: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿ ವತಿಯಿಂದ ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿಗೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ವಿಭಾಗ ಸಹಪ್ರಭಾರಿ ಜಯಂತ್ ಕೋಟ್ಯಾಮ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯೆಲ್ ಮೆಂಡೋನ್ಸಾ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರತ್ನಾಕರ್ ಬುಣ್ಣನ್, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಸೆಬಾಸ್ಟಿಯನ್, ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಶಾಸಕ ಹರೀಶ್ ಪೂಂಜ ಅವರಿಗೆ ಶುಭಾಶಯಗಳನ್ನು ಕೋರಿದರು.

ಅಭಿವೃದ್ಧಿ ಕಾರ್ಯಗಳು, ಜನಪರ ಆಡಳಿತ ಹಾಗೂ ಕ್ಷೇತ್ರದ ಸಮಗ್ರ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ಲಭಿಸಿರುವುದು ಕ್ಷೇತ್ರದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಕಾರ್ಯಕ್ರಮದಲ್ಲಿ ಮುಖಂಡರು ಅಭಿಪ್ರಾಯಪಟ್ಟರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ