ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ತಪ್ಪೇನು? : ಸಿಎಂ ಬಸವರಾಜ ಬೊಮ್ಮಾಯಿ

ಯಾದಗಿರಿ : ‘ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿ, ನೈತಿಕತೆ ಬೆಳೆಯುತ್ತದೆ. ಗುಜರಾತ್‌ ರಾಜ್ಯದಂತೆ ನಮ್ಮಲ್ಲಿಯೂ ಭಗವದ್ಗೀತೆ ಬೋಧಿಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.

‘ಗುಜರಾತ್‌ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ ಅನುಕೂಲವಾಗಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವರಲ್ಲಿ ನೈತಿಕತೆ ಬೆಳೆಸುವ ಅಗತ್ಯವಿದೆ. ಹೀಗಾಗಿಯೇ ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಉಂಟು ಮಾಡಬಾರದು’ ಎಂದು ಸುರಪುರ ತಾಲ್ಲೂಕಿನ ದೇವತ್ಕಲ್‌ ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

‘ಕರ್ನಾಟಕದ ಶಾಲಾ ಪಠ್ಯದಲ್ಲಿಯೂ ಭಗವದ್ಗೀತೆ ಅಳವಡಿಸಲು ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇಲಾಖೆ ಮೊದಲು ವರದಿ ನೀಡಲಿ. ನಾನು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ’ ಎಂದ ಅವರು, ‘ಮಕ್ಕಳ ವ್ಯಕ್ತಿತ್ವ ವಿಕಸನವೇ ಸರ್ಕಾರದ ಮುಖ್ಯ ಗುರಿ. ಆ ನಿಟ್ಟಿಯಲ್ಲಿ ಸೂಕ್ತ ಹೆಜ್ಜೆ ಇಡುತ್ತೇವೆ’ ಎಂದರು.

‘ಭಗವದ್ಗೀತೆ ಅಳವಡಿಸಿದರೆ ಮಾತ್ರ ಮಕ್ಕಳಲ್ಲಿ ನೈತಿಕೆ ಬೆಳೆಯುತ್ತದೆಯೇ? ಈಗ ನೈತಿಕ ಶಿಕ್ಷಣ ಸಿಗುತ್ತಿಲ್ಲವೇ’ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗರಂ ಆದ ಪ್ರಸಂಗ ನಡೆಯಿತು.

Spread the love
  • Related Posts

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕ : ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ ಅದ್ದೂರಿಯಾಗಿ…

    Spread the love

    You Missed

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 15 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 35 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 206 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 30 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ