ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ವಿದುಷಿ ಸ್ವಾತಿ ಜಯರಾಮ್ ಮತ್ತು ವಿದುಷಿ ಪ್ರಥ್ವಿ ಸತೀಶ್ ರವರ ಶಿಷ್ಯೆಯಾಗಿದ್ದು ಪತ್ರಕರ್ತ ಮನೊಹರ್ ಬಳಂಜ, ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಷ್ರೂಷಕಿ ಲಿಖಿತಾ ದಂಪತಿಗಳ ಪುತ್ರಿಯಾಗಿದ್ದಾಳೆ.
ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್ ಕಂಪನಿ ಮೂಲಕ ಈ ವಿಮಾ…