ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರು ನ.19ರಂದು ನಿಧನರಾಗಿದ್ದಾರೆ.

ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನ.19ರಂದು ಕೊನೆಯುಸಿರೆಳೆದಿದ್ದಾರೆ.

ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಕೆಲವು ಸಮಯಗಳಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿದ್ದರು. 2024ರ ಸುದ್ದಿ ಬಿಡುಗಡೆ ದೀಪಾವಳಿ ವಿಶೇಷಾಂಕದ ಕಾರ್ಯ ನಿರ್ವಾಹಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಇಬ್ಬರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಅವರನ್ನು ಅಗಲಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 5 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 16 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 36 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 209 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ