BIG BREAKING: ಇಂದು ಬೆಳಗ್ಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ!

ನವದೆಹಲಿ: ಇಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ. ಶತಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ.

READ ALSO

ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗಿದೆ. ಭಾರತದ ಸಾಧನೆಗೆ ವಿಶ್ವಸಂಸ್ಥೆ ಮತ್ತು ಜಾಗತಿಕ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಕೋವಿಡ್ ವಿರುದ್ಧ ಭಾರತ 100 ಕೋಟಿ ಡೋಸ್ ಲಸಿಕೆ ಸುರಕ್ಷಾ ಕವಚ ಸಾಧಿಸಿದೆ. ಭಾರತೀಯ ವಿಜ್ಞಾನ, ಉದ್ಯಮ ಮತ್ತು ದೇಶದ ಜನರ ಸಾಮೂಹಿಕ ಸ್ಪೂರ್ತಿಗೆ ಸಂದ ಜಯ ಇದಾಗಿದೆ ಎಂದು ಸಂಭ್ರಮ ಹಂಚಿಕೊಂಡ ಪ್ರಧಾನಿ ಮೋದಿ, ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.

ಇಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿರುವ ಮೋದಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.