TRENDING
Next
Prev

Big News : ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್​: ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ.

ಇಂದು ಬೆಳಗ್ಗೆ 9 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಹತ್ವದ ಘೋಷಣೆ ಮಾಡಿದರು.
ಕಳೆದ ಒಂದು ವರ್ಷಗಳಿಂದ ರೈತರು ನಿರಂತರವಾಗಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು. ಕೊನೆಗೂ ರೈತರ ಪ್ರತಿಭಟನೆಗಳಿಗೆ ಮಣಿದಿರುವ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ.

READ ALSO

ಇದಕ್ಕೂ ಮುನ್ನ ಶ್ರೀ ಗುರುನಾನಕ್ ದೇವ್​ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ ನಂತರ ಕರ್ತಾರ್‌ಪಿರ್ ಕಾರಿಡಾರ್ ಮತ್ತೆ ತೆರೆದಿರುವುದು ಸಂತಸ ತಂದಿದೆ. ಗುರುನಾನಕ್ ಅವರು ‘ವಿಚ್ ದುನಿಯಾ ಸೇವ್ ಕಮೈಯೆ, ತಾನ್ ದರ್ಗಾ ಬೈಸನ್ ಪೈಯೆಯಾ’ ಎಂದು ಹೇಳಿದ್ದರು. ಅಂದರೆ ದೇಶ ಸೇವೆಯ ಹಾದಿ ಹಿಡಿದರೆ ಮಾತ್ರ ಬದುಕು ಹಸನಾಗಲು ಸಾಧ್ಯ. ಜನರ ಜೀವನವನ್ನು ಸುಲಭಗೊಳಿಸಲು ನಮ್ಮ ಸರ್ಕಾರ ಈ ಸೇವಾ ಭಾವನೆಯೊಂದಿಗೆ ಕೆಲಸ ಮಾಡುತ್ತಿದೆ ಎಂದರು.

ನಾನು 2014ರಲ್ಲಿ ಪ್ರಧಾನಿ ಆದಾಗ ನಮ್ಮ ಸರ್ಕಾರವೂ ರೈತರ ಕಲ್ಯಾಣ ಮತ್ತು ಅಭಿವೃದ್ಧಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿದೆ ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವ ಮೂಲಕ ಮಹತ್ವದ ಘೋಷಣೆ ಮಾಡಿದರು.