ಮಂಗಳೂರು: ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರು ಇಂದು ರಾತ್ರಿ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಎರಡು ದಶಕಗಳ ಬಳಿಕ ಮೊದಲ ಬಾರಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಕಡಲನಗರಿ ಮಂಗಳೂರಿನಲ್ಲಿ ನಡೆಯಲಿದ್ದು ನಾಳೆ ನಡೆಯಲಿರುವ ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಬಿ.ಎಸ್.ವೈ ಪಾಲ್ಗೊಳ್ಳಲಿದ್ದಾರೆ. .
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಜಿಲ್ಲೆಯ ಬಿಜೆಪಿ ಶಾಸಕರು, ಮೇಯರ್, ಉಪ ಮೇಯರ್ ಉಪಸ್ಥಿತರಿದ್ದರು.