ಕುಮಾರಸ್ವಾಮಿಗೆ ಸೆಡ್ಡು ಹೊಡೆದ ನಾಯಕ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯಾದರೆ ಪಕ್ಷ ತೊರೆಯುವುದಾಗಿ ಸ್ಫೋಟಕ ಹೇಳಿಕೆ ನೀಡಿದ ವೈ.ಎಸ್.ವಿ.ದತ್ತಾ !

ಶಿವಮೊಗ್ಗ: ಆಡಳಿತರೂಢ ಬಿಜೆಪಿ ಸರ್ಕಾರಕ್ಕೆ ಒಂದಿಲ್ಲೊಂದು ವಿಚಾರದಲ್ಲಿ ಕುಮಾರಸ್ವಾಮಿ ಅವರು ಬೆಂಬಲ ಕೊಡುತ್ತಿದ್ದಾರೆ. ಇದರಿಂದ ಜೆಡಿಎಸ್‌ ನ ಇನ್ನುಳಿದ ನಾಯಕರುಗಳಿಗೆ ಬೇಸರ ಉಂಟುಮಾಡಿದೆ ಎಂದು ಜೆಡಿಎಸ್ ಹಿರಿಯ ನಾಯಕ ವೈ.ಎಸ್.ವಿ.ದತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷಕ್ಕಾದರೂ ಒಂದು ಸ್ಪಷ್ಟ ನಿಲುವಿರಬೇಕು. ಈಗಾಗಲೇ ಈ ಬಗ್ಗೆ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ಸ್ವಪಕ್ಷದ ನಡೆಗೆ ವಿರೋಧ ವ್ಯಕ್ತಪಡಿಸಿದ್ದು, ಬಿಜೆಪಿ ಜೊತೆ ಮೈತ್ರಿಯಾದರೆ ಜೆಡಿಎಸ್‌ನಲ್ಲಿ ಇರುವುದಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಇದೀಗ ಜೆಡಿಎಸ್ ಹಿರಿಯ ನಾಯಕ ವೈ.ಎಸ್.ವಿ.ದತ್ತಾ ಸ್ವಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

READ ALSO