ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಬಿ. ಎಸ್ ಕುಲಾಲ್, ಪ್ರಸಾದ್ ಶೆಟ್ಟಿ ಏಣಿಂಜೆ, ಪುಷ್ಪರಾಜ ಶೆಟ್ಟಿ ಹಾಗೂ ಮಂಜುನಾಥ ರೈ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಗಳಾಗಿ ಜಿಲ್ಲಾ ಸಂಘದ ಎಸ್. ದಿವಾಕರ ಪದ್ಮುಂಜ ಹಾಗೂ ಅಭಿಷೇಕ್ ಹೆಚ್ ಭಾಗವಹಿಸಿ ಚುನಾವಣಾ ಆಯ್ಕೆ ಪ್ರಕ್ರಿಯೆನ್ನು ನಡೆಸಿದರು.





