ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜರುಗಲಿದೆಯೆಂದು ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ತಿಳಿಸಿದೆ.

ದೇಶದ ಜನಪ್ರಿಯ ಪ್ರಧಾನಿ ಶ್ರೀ ನರೇಂದ್ರ ಮೋದೀಜಿಯವರ 75ನೇ ಹುಟ್ಟು ಹಬ್ಬದ ಸಲುವಾಗಿ ಹಾಗು ದಣಿವರಿಯದ ಅತ್ಯುತ್ತಮ ಆಡಳಿತವನ್ನು ನಡೆಸಿಕೊಂಡು ಗುಜರಾತ್ ಹಾಗೂ ಭಾರತದ ಆಡಳಿತ ಚುಕ್ಕಾಣಿ ಹಿಡಿದು 25ನೇ ವರ್ಷ ಆರಂಭವಾಗುವ ಸವಿನೆನಪಿಗಾಗಿ ಅದೇ ದಿನ ಬೆಳಗ್ಗೆ 8.00 ಗಂಟೆಗೆ ನಮೋ‌ ಮ್ಯಾರಥಾನ್ ಓಟ, ವಾಣಿ ಶಿಕ್ಷಣ ಸಂಸ್ಥೆಯ ಬಳಿಯಿಂದ ಆರಂಭಗೊಂಡು ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ನಡೆಯಲಿದೆ. ಬಳಿಕ ಗಣ್ಯರ ಉಪಸ್ಥಿತಿಯಲ್ಲಿ ತಾಲೂಕಿನ ಮನೆ ಹಬ್ಬವಾದ ದೋಸೆಹಬ್ಬಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ ಸಾಯಂಕಾಲದವರೆಗೆ ನಡೆಯಲಿದ್ದು, ಮಕ್ಕಳ ಹುಲಿವೇಷ ಸ್ಪರ್ಧೆ ಬಾಲೆ ಪಿಲಿ ಸಂಜೆ 6ರ ಗೋಧೋಳಿ ಮುಹೂರ್ತದಲ್ಲಿ ಗೋ ಪೂಜಾ ಉತ್ಸವ, ದೀಪ ಪ್ರಜ್ವಲನೆ ಹಾಗೂ ರಾತ್ರಿ ಭಜರಂಗ ಬಲಿ ನಾಟಕ ಪ್ರದರ್ಶನ ಹಾಗೂ ರೀಲ್ಸ್ ಸ್ಪರ್ಧೆಯೂ ನಡೆಯಲಿದೆ. ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು, ಜಿಲ್ಲಾ ಬಿಜೆಪಿ ಮುಖಂಡರು, ಸಂಸದರು, ಶಾಸಕರೂ ಸೇರಿದಂತೆ ಹಲವು ಗಣ್ಯರು ಭಾಗಿಯಾಗುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಆಗಮಿಸಿ ದೋಸೆ ಸವಿದು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.

Spread the love
  • Related Posts

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ 666ನೇ “ವಾತ್ಸಲ್ಯ ಮನೆ” ಹಸ್ತಾಂತರ ಹಾಗೂ ಫಲಾನುಭವಿಗಳಿಗೆ ಮಾಸಾಶನ ಮತ್ತು ಇತರ ಸವಲತ್ತುಗಳನ್ನು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿಯವರು ವಿತರಿಸಿದರು ಬಳಿಕ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 15 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 15 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 37 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 33 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 57 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 54 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ