ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಜ.2ರಂದು ಬೆಳ್ತಂಗಡಿ ಪತ್ರಕರ್ತರ ಭವನದಲ್ಲಿ ಜರುಗಿತು. ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ಅಚುಶ್ರೀ ಬಾಂಗೇರು, ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಜಾರಪ್ಪ ಪೂಜಾರಿ ಬೆಳಾಲು ಮತ್ತು ಕೋಶಾಧಿಕಾರಿಯಾಗಿ ಪತ್ರಕರ್ತ ಪ್ರಸಾದ್ ಶೆಟ್ಟಿ ಏಣಿಂಜೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಉದಯವಾಣಿ ವೇಣೂರು ವಲಯ ವರದಿಗಾರ ಪದ್ಮಾನಾಭ, ಜೊತೆ ಕಾರ್ಯದರ್ಶಿಯಾಗಿ ಸಂಜೀವ ಎನ್.ಸಿ. ಆಯ್ಕೆಯಾದರು. ಸಮಾರಂಭದ ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞ ವಹಿಸಿದ್ದರು. ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತರ ಆರ್. ಎನ್. ಪೂವಣಿ ಆಯ್ಕೆ ಪ್ರಕ್ರಿಯೆ ನಡೆಸಿದರು.
ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಜಿ. ಸಂಘದ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಮನೋಹರ ಬಳಂಜ ನಿರೂಪಿಸಿದರು.






