ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ ಅಂಬೇಡ್ಕರ್ ಭವನ ಬೆಳ್ತಂಗಡಿದಲ್ಲಿ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷರಾದ ವಕೀಲರಾದ ಉದಯ್ ಬಿ.ಕೆ ಅವರು ವಹಿಸಿದ್ದರು ಈ ಸಂದರ್ಭದಲ್ಲಿ ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡಿ ಜಿಲ್ಲಾಡಳಿತ ಮತ್ತು ನೂತನವಾಗಿ ಬಂದಿರುವಂತಹ ಪೊಲೀಸ್ ವರಿಷ್ಠಾಧಿಕಾರಿಗಳು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಂದ ಕೆಂಪು ಕಲ್ಲು ಮರಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಇದರಿಂದಾಗಿ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ದೃಷ್ಟಿಯಲ್ಲಿ ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ತಹಶೀಲ್ದಾರರು ಪೊಲೀಸ್ ನಿರೀಕ್ಷಕರಿಗೆ ಮನವಿ ಮಾಡುವುದು ಈ ಮನವಿಗೆ ಒಂದು ವಾರದ ಒಳಗೆ ಸ್ಪಂದಿಸದಿದ್ದರೆ ಬೃಹತ್ ಜನೊಂದೋಲನ ಸಭೆಯನ್ನು ನಡೆಸುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಬೆವರಿನ ಶ್ರಮದ ದಿಂದ ನಿರ್ಮಾಣವಾಗಿರುವ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾರ್ಮಿಕರಿಗೆ ಭಾರಿ ರೀತಿಯ ತೊಂದರೆಗಳನ್ನು ಉಂಟು ಮಾಡುತ್ತಿದ್ದಾರೆ ಈ ಕಟ್ಟಡ ಮಂಡಳಿಯ ಹಣವನ್ನು ಕಾರ್ಮಿಕರಿಗೆ ಅಗತ್ಯ ಇಲ್ಲದ ಯೋಜನೆಗಳನ್ನು ತಂದು ಕಾರ್ಮಿಕರ ಬೆವರಿನ ಶ್ರಮದ ಹಣವನ್ನು ಪೋಲು ಮಾಡುತ್ತಿದ್ದಾರೆ ನಾಲ್ಕು ವರ್ಷಗಳಿಂದ ಕಾರ್ಮಿಕರಿಗೆ ಸರಿಯಾಗಿ ಸ್ಕಾಲರ್ಶಿಪುಗಳು ಬರುತ್ತಿಲ್ಲ ವೃದ್ಧಾಪ್ಯ ಪಿಂಚಣಿಗಳು ಬರುತ್ತಿಲ್ಲ ಆಸ್ಪತ್ರೆ ಚಿಕಿತ್ಸಾ ವೆಚ್ಚದಲ್ಲಿ ಕಾರ್ಮಿಕರಿಗೆ ಬಾರಿ ರೀತಿ ಅನ್ಯಾಯವಾಗುತ್ತಿದೆ ಕಾರ್ಮಿಕರಿಗೆ ನೇರ ಪಾವತಿಯಾಗುವ ಯೋಜನೆಗಳನ್ನು ಮಾತ್ರ ತರುವಂತೆ ಮತ್ತು ಕಾರ್ಮಿಕರಿಗೆ ಅಗತ್ಯ ಇಲ್ಲದ ಹೆಲ್ತ್ ಕ್ಯಾಂಪ್ ಗಳು ಟ್ರೈನಿಂಗ್ ಕ್ಯಾಂಪ್ಗಳ್ಳನು ತಂದು ಕಟ್ಟಡ ಮಂಡಳಿಯ ಹಣವನ್ನು ದುರುಪಯೋಗ ಮಾಡುತ್ತಿದ್ದಾರೆ ಕೇವಲ ಕಾರ್ಮಿಕರಿಗೆ ವಂಚಿಸುವ ಕೆಲಸ ಕಟ್ಟಡ ಮಂಡಳಿಯಿಂದ ಆಗುತ್ತಿದೆ ಈ ಬಗ್ಗೆ ಕಾರ್ಮಿಕರು ಜಾಗೃತಿ ವಹಿಸಬೇಕು ಜುಲೈ 7ರಂದು ಈ ಕುರಿತು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರ ಕಚೇರಿಯ ಎದುರು ಬೃಹತ್ ಕಾರ್ಮಿಕ ಜಾಥಾವನ್ನು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಎಮ್ ಎಸ್ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಅವರು ಮಾತನಾಡಿ ಕಾರ್ಮಿಕರ ಪರವಾಗಿ ಸದಾ ನಾವು ಧ್ವನಿ ಎತ್ತಲಿದ್ದೇವೆ ಇದೀಗ ಕಾರ್ಮಿಕರಿಗೆ ಕಟ್ಟಡ ನಿರ್ಮಾಣದ ಸಾಮಗ್ರಿಗಳು ದೊರಕದೆ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ಸಮಸ್ಯೆಯನ್ನು ಶೀಘ್ರವಾಗಿ ಜಿಲ್ಲಾಡಳಿತ ಪರಿಹರಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಎಮ್ಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್ ಬಿ ಎಂ ಎಸ್ ನ ಜಿಲ್ಲಾಧ್ಯಕ್ಷರಾದ ವಕೀಲ ರಾದ ಅನಿಲ್ ಕುಮಾರ್ ಬಿಎಂಎಸ್ ನ ತಾಲೂಕು ಅಧ್ಯಕ್ಷರಾದ ವಕೀಲ ಉದಯ್ ಬಿಕೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಶೆಟ್ಟಿ ಮತ್ತು ಪ್ರಮುಖರಾದ ಉದಯ್ ಕುಮಾರ್ ಉಜಿರೆ ಗಣೇಶ್ ಪೂಜಾರಿ ಪೆರಾಡಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು ಕುಮಾರ್ ‌ನಾಧ್ ಸ್ವಾಗತಿಸಿ ಗಣೇಶ್ ಪೂಜಾರಿ ವಂದಿಸಿದರು.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 52 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 38 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 36 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 32 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 41 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 36 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ