ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ ಪ್ರಸ್ತಾವನೆಯಲ್ಲಿ ಈಗಾಗಲೇ ಮೊದಲ ಹಂತದಲ್ಲಿ ರೂ.9 ಕೋಟಿ ಬಿಡುಗಡೆಗೊಳಿಸಿದ್ದು ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮವು ಜೂ.14 ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಜರುಗಿತು.

ನೂತನ ನ್ಯಾಯಾಲಯದ ಕಟ್ಟಡದ ಶಂಕುಸ್ಥಾಪನೆಯನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮಹಮ್ಮದ್ ನವಾಜ್ ರವರ ಉಪಸ್ಥಿತಿಯಲ್ಲಿ ಹೈಕೋರ್ಟ್, ನ್ಯಾಯಮೂರ್ತಿಗಳು ಮತ್ತು ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್.ಟಿ. ನರೇಂದ್ರ ಪ್ರಸಾದ್‌ರವರು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ನ್ಯಾಯಾಧೀಶರಾದ ಬಸವರಾಜ್‌ ವಹಿಸಿಕೊಂಡಿಸಿದ್ದರು. ಮುಖ್ಯ ಅಥಿತಿಗಳಾಗಿ ಆರೋಗ್ಯ ಇಲಾಖೆಯ ಸಚಿವ ಯು.ಟಿ ಖಾದರ್, ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿಶ್ವಜಿತ್‌ ಶೆಟ್ಟಿ, ರಾಜೇಶ್ ರೈ ಕೆ, ತ್ಯಾಗರಾಜ್ ಎನ್. ಇನವಳ್ಳಿ, ಮುರಳೀಧರ ಪೈ, ಸಂಸದ ಬ್ರಿಜೇಶ್ ಚೌಟ, ವಿಧಾನ ಪರಿಷತ್‌ ಶಾಸಕರುಗಳಾದ ಐವನ್ ಡಿಸೋಜ ಮತ್ತು ಕೆ.ಪ್ರತಾಪಸಿಂಹ ನಾಯಕ್ ಹಾಗೂ ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯ ಪಿ.ಪಿ ಹೆಗ್ಡೆ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ ಭಾಗವಹಿಸಿದ್ದಾರೆ.

ದ.ಕ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜು, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್. ಲೋಬೊ, ವಕೀಲರ ಸಂಘದ ಕಾರ್ಯದರ್ಶಿ ಪ್ರಶಾಂತ್ ಎಂ., ಜಿಲ್ಲಾ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತತ ಗೋಕುಲ್‌ದಾಸ್, ಲೋಕೋಪಯೋಗಿ ಇಲಾಖೆ ಜಿಲ್ಲಾ ಕಾರ್ಯನಿರ್ವಾಹಕರಾದ ಅಭಿಯಂತರ ರಾಘವೇಂದ್ರ ನಾಯ್ಕ, ಸಮಿತಿ ಅಧ್ಯಕ್ಷ ಶಿವಕುಮಾರ್ ಎಸ್. ಎಂ., ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್ ಗೌಡ, ಮಾಜಿ ಅಧ್ಯಕ್ಷ ವಸಂತ ಮರಕಡ, ಮಾಜಿ ಕಾರ್ಯದರ್ಶಿ ನವೀನ್ ಬಿ.ಕೆ, ಅಪರ ಸರಕಾರಿ ವಕೀಲ ಮನೋಹ‌ರ್ ಕುಮಾ‌ರ್, ನೋಟರಿ ವಕೀಲರಾದ ಭಗೀರಥ ಜಿ., ನ್ಯಾಯವಾದಿ ಗಣೇಶ್ ಗೌಡ, ನ್ಯಾಯವಾದಿ ಹಾಗೂ ನೋಟರಿ ಸಂತೋಷ್ ಕುಮಾರ್ ಲಾಯಿಲ, ನ್ಯಾಯವಾದಿ ಕೇಶವ ಗೌಡ, ನ್ಯಾಯವಾದಿ ಶ್ರೀನಿವಾಸ ಗೌಡ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ನವೀನ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್. ಲೋಬೊ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಧನಂಜಯ ರಾವ್ ಹಾಗೂ ಮನೋಹರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ