ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಸಹಯೋಗದಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ತಾಲೂಕಿನ ಶಾಸಕ ಹರೀಶ್ ಪೂಂಜಾರವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಜಿಲ್ಲಾಪಂಚಾಯತ್ ಸದಸ್ಯರು, ಪಟ್ಟಣ ಪಂಚಾಯತ್ ಸದಸ್ಯರು,ತಾಲೂಕು ಪಂಚಾಯತ್ ಸಸಸ್ಯರು, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಕಲಾ ಮಧು, ತಾಲೂಕು ಆಡಳಿತ ವೈದ್ಯಾಧಿಕಾರಿ ವಿದ್ಯಾವತಿ, ತಾಲೂಕು ನೋಡೆಲ್ ಅಧಿಕಾರಿ ರತ್ನಾಕರ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರು, ಆರೋಗ್ಯ ಸಹಾಯಕರು ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

READ ALSO

ಪ್ರಥಮ ಹಂತದ ವ್ಯಾಕ್ಸೀನ್ ಲಸಿಕೆಯನ್ನು ಆರೋಗ್ಯ ಸಿಬಂಧಿಯವರಿಗೆ, ಆಶಾಕಾರ್ಯಕರ್ತರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಯಿತು.