ಬೆಳ್ತಂಗಡಿ : ಬೆಳ್ತಂಗಡಿ ಜ್ಯೂನಿಯರ್ ಕಾಲೇಜ್ ಗ್ರೌಂಡ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಟ್ಯಾಕ್ಸಿ ವಾಹನ ಚಾಲಕ ವಾಸು ಎಂಬವರ ಮೇಲೆ ತಲವಾರು ದಾಳಿ ನಡೆದಿದೆ.
ಇಂದು ಬೆಳಗ್ಗಿನ ಜಾವ ವಾಸುರವರ ಮಗನ ಮೇಲೆಯೇ ಇದೀಗ ಶಂಕೆ ವ್ಯಕ್ತವಾಗಿದ್ದು, ಮೂವರು ದುಷ್ಕರ್ಮಿಗಳು ಸೇರಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದಾಳಿಯಿಂದಾಗಿ ವಾಸು ರವರು ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ದಾಳಿ ನಡೆಸಿದವರು ಪರಾರಿಯಾಗಿದ್ದು, ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.