ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ (ರಿ) ದಕ್ಷಿಣ ಕನ್ನಡ ಜಿಲ್ಲೆ ಇವರ ನೇತೃತ್ವದಲ್ಲಿ
ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ (ನಿ) ಬೆಳ್ತಂಗಡಿ, ಸ್ಪಂದನ ಸೇವಾ ಸಂಘ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.

ಈ ಕಾರ್ಯಕ್ರಮವನ್ನು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ಶ್ರೀ ಕುಶಾಲಪ್ಪ ಗೌಡ ಪೂವಾಜೆ ಇವರು ದೀಪ ಪ್ರಜ್ವಲನೆಯ ಮಾಡುವ ಮೂಲಕ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸ್ಪಂದನ ಸೇವಾ ಸಂಘದ ಸಂಚಾಲಕರಾದ ಮೋಹನ್ ಗೌಡ , ತಾಲೂಕು ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಗೀತಾ ರಾಮಣ್ಣ ಗೌಡ , ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕರಾದ ಶ್ರೀ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಯಶಸ್ವಿಗೆ ಕಿರಣ್ ಚಂದ್ರ ಪುಷ್ಪಗಿರಿ ರಕ್ತದಾನ ಮಾಡಿ ಆರ್ಥಿಕ ಸಹಕಾರ ನೀಡಿ ಪ್ರೋತ್ಸಾಹಿಸಿದ್ದಾರೆ.

ಈ ರಕ್ತದಾನ ಶಿಬಿರದಲ್ಲಿ ಒಟ್ಟು 72 ದಾನಿಗಳು ರಕ್ತವನ್ನು ನೀಡಿ ಸಹಕರಿಸಿದರು, ರಕ್ತದಾನಿಗಳಿಗೆ ಸಸ್ಯದಾನ ವಿತರಣೆ ನಡೆಯಿತು. ಮಲವಂತಿಗೆ ಗ್ರಾಮದ ಜಾಲು ನಿವಾಸಿ ಕೃಷ್ಣ ಗೌಡ ಇವರಿಗೆ ಗಾಲಿ ಕುರ್ಚಿ ವಿತರಣೆ ಮಾಡಲಾಯಿತು ಹಾಗೂ ಸ್ಪಂದನ ಸೇವಾ ಸಂಘದಿಂದ ಆರ್ಥಿಕ ಹಿಂದುಳಿದ 6 ಕುಟುಂಬಗಳಿಗೆ ತಲಾ ರೂ. 10,000/-ದ ಚೆಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಜಿ
ಗಮ್ಮತ್ ಕ್ರೀಡಾಕೂಟದಲ್ಲಿ ಉಳಿತಾಯವಾದ ಮೊತ್ತದಲ್ಲಿ ರೂಪಾಯಿ 50 ಸಾವಿರದ ಚೆಕ್ಕನ್ನು ಸ್ಪಂದನ ಸೇವಾ ಸಂಘಕ್ಕೆ ಹಸ್ತಾಂತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತಾಲೂಕು ಸಮಿತಿಯ ನಿರ್ದೇಶಕರುಗಳಾದ ಜಯಾನಂದ ಗೌಡ ಬೆಳ್ತಂಗಡಿ, ಮಾಧವ ಗೌಡ ಬೆಳ್ತಂಗಡಿ, ದಿನೇಶ್ ಗೌಡ ಕೊಯ್ಯೂರು, ಗೌರವಾಧ್ಯಕ್ಷರು, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಪದ್ಮ ಗೌಡ ಬೆಳಾಲು, ನಿರ್ದೇಶಕರಾದ ಪುರಂದರ ಮೊಗ್ರು, ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರಸಾದ್ ಕಡ್ತಿಯಾರ್, ಮಹಿಳಾ ವೇದಿಕೆಯ ಜೊತೆ ಕಾರ್ಯದರ್ಶಿ ಮೀನಾಕ್ಷಿ ಮಹಾಬಲ ಗೌಡ, ಪೂರ್ಣಿಮಾ ಜಂಕಿನಡ್ಕ, ಯುವ ವೇದಿಕೆಯ ಉಪಾಧ್ಯಕ್ಷರುಗಳಾದ ಪ್ರಶಾಂತ್ ಅಂತರ ಕಡಿರುದ್ಯಾವರ, ನಿತಿನ್ ಕನ್ಯಾಡಿ ಸಂಘಟನಾ ಕಾರ್ಯದರ್ಶಿ ಪ್ರಮೋದ್ ದಿಡುಪೆ, ಕ್ರೀಡಾ ಕಾರ್ಯದರ್ಶಿ ಗಿರೀಶ್ ನಿಡ್ಲೆ, ಹೇಮಂತ್ ಕಳಿಯ, ಪ್ರದೀಪ್ ನಾಗಾಜೆ, ಭರತ್ ಪುದುವೆಟ್ಟು, ತೀಕ್ಷಿತ್ ದಿಡುಪೆ, ಪ್ರಸಾದ್ ಅಡಿಮಾರು ಚಾರ್ಮಾಡಿ, ಕಿಶಾನ್ ಸವಣಾಲು, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಸೋಮಂತ್ತಡ್ಕ ಶಾಖಾ ವ್ಯವಸ್ಥಾಪಕರಾದ ಉಮೇಶ್ ಮೈರ್ನೋಡಿ, ಕಲ್ಲೇರಿ ಶಾಖಾ ವ್ಯವಸ್ಥಾಪಕರಾದ ನಿತೇಶ್ ಬೆಳ್ತಂಗಡಿ, ಸಿಬ್ಬಂದಿಗಳಾದ ಚರಣ್ ಬೈಪಾಡಿ, ಶೋದನ್ ಬೈಪಾಡಿ, ಯುವ ವೇದಿಕೆ ಮತ್ತು ಮಹಿಳಾವೇದಿಕೆಯ ಸದಸ್ಯರು,
ಉಪಸ್ಥಿತರಿದ್ದರು.

ತಾಲೂಕು ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ ಧನ್ಯವಾದ ನೀಡಿದರು.

ಕಾರ್ಯಕ್ರಮವನ್ನು ತಾಲೂಕು ಯುವ ವೇದಿಕೆಯ ಕಾನೂನು ಸಲಹೆಗಾರರಾದ ನವೀನ್ ಬಿ ಕೆ ನಿರೂಪಿಸಿದರು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 262 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 43 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 308 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 51 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ