ಬೆಳ್ತಂಗಡಿ ತಾಲೂಕಿನಾಧ್ಯಂತ ಇನ್ನು 15 ದಿನಗಳ ಕಾಲ ಅಪರಾಹ್ನ 2pm ನಂತರ ಸ್ವಯಂ ಲಾಕ್ ಡೌನ್!

ಬೆಳ್ತಂಗಡಿ: ಕೊರೋನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಹಾಗೂ ಲಾಕ್ ಡೌನ್ ಜಾರಿ ಮಾಡುವ ಕುರಿತು 48 ಗ್ರಾ.ಪಂ ವ್ಯಾಪ್ತಿಗಳ ಪ್ರತಿನಿಧಿ ಜೊತೆ ಸಮಾಲೋಚನಾ ಸಭೆ ಜು.11 ರಂದು ಎಸ್.ಡಿ.ಎಮ್ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ತಾಲೂಕನ್ನು ಕೊರೋನಾ ಮುಕ್ತ ತಾಲೂಕು ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಪ್ರಯತ್ನ ಅಗತ್ಯ. ಕೊರೋನಾ ಹೆಚ್ಚಾಗದಂತೆ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಬೇಕು. ಪ್ರತಿ ಬೂತ್ ನಲ್ಲಿ ಕೊರೋನಾ ಸೈನಿಕರ ತಂಡವನ್ನು ರಚಿಸಬೇಕು, ತಾಲೂಕಿನಲ್ಲಿ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಅಭಿಪ್ರಾಯ ತಿಳಿಸಬೇಕು ಎಂದು ತಿಳಿಸಿದರು.

ಶೇಕಡ 90 ಜನರ ಅಭಿಪ್ರಾಯ ಮದ್ಯಾಹ್ನ 2ಗಂಟೆವರೆಗೆ ಮಾತ್ರ ಅಂಗಡಿ ಗಳನ್ನು ತೆರೆಯುವುದು ಎಂಬ ತಿರ್ಮಾನ ವ್ಯಕ್ತವಾಯ್ತು. ಹಾಗೂ ತಾಲೂಕಿನ 9 ಖಾಸಗಿ ಆಸ್ಪತ್ರೆ ಗಳು ಇನ್ನೂ ಮುಂದಕ್ಕೆ ಮದ್ಯಾಹ್ನ 2 ಗಂಟೆಯಿಂದ ಮರುದಿನ ಬೆಳಿಗ್ಗೆ 8 ಗಂಟೆವರೆಗೆ ಹೊರ ರೋಗಿ ವಿಭಾಗ ಲಬ್ಯವಿರುವುದಿಲ್ಲ ಮತ್ತು ತುರ್ತು ಸೇವೆ,ಅಪಘಾತ ವಿಭಾಗ, ನೊಂದಾವಣೆ ವಿಬಾಗಗಳು ಎಂದಿನಂತೆ 24ಗಂಟೆ ಕರ್ತವ್ಯ ನಿರ್ವಹಿಸುವುದು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಶಾಸಕರು ಎಲ್ಲರ ಅಭಿಪ್ರಾಯ ಕ್ರೂಡಿಕರಿಸಿ ಇನ್ನೂ ಮುಂದೆ 15 ದಿನಗಳ ಮದ್ಯಾಹ್ನ 2 ಗಂಟೆಯ ನಂತರ ಸ್ವಯಂ ಘೋಷಿತ ಲಾಕ್ ಡೌನ್ ಎಂಬ ತಿರ್ಮಾನ ಕೈಗೊಂಡು ಈ ಲಾಕ್ ಡೌನ್ ಯಾವುದೆ ಒತ್ತಾಯ ಪೂರ್ವಕ ಅಲ್ಲ ಬದಲಿಗೆ ಜನ ಜಾಗೃತಿ ಅಭಿಯಾನ ವಾಗಿ ಕೊರೊನ ನಿಯಂತ್ರಣ ಮಾಡುವಲ್ಲಿ ನಿರ್ಣಯ ಮಾಡೋಣ ಎಂಬ ಜನರ ಒಕ್ಕೊರೊಲಿನ ಜನ ದ್ವನಿಯಾಗಿ ಶಾಸಕ ನೆಲೆಯಲ್ಲಿ ಜನಾಭಿಪ್ರಾಯವನ್ನು ಘೋಷಿಸಿದರು.
ವೇದಿಕೆಯಲ್ಲಿ ತಹಶೀಲ್ದಾರ್ ಮಹೇಶ್ ಜೆ, ಕಾರ್ಯನಿರ್ವಾಹಣಾಧಿಕಾರಿ ಜಯರಾಮ್, ನ.ಪಂ ಮುಖ್ಯಾಧಿಕಾರಿ ಸುಧಾಕರ್, ಜಿ.ಪಂ ಸದಸ್ಯ ಕೊರಗಪ್ಪ, ಆರೋಗ್ಯಾಧಿಕಾರಿ ಡಾ.ಕಲಾಮಧು ಉಪಸ್ಥಿತರಿದ್ದರು.

ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ನಿಂದ ತಲಾ ಇಬ್ಬರು ಪ್ರತಿನಿಧಿಗಳು, ನ.ಪಂ, ತಾ.ಪಂ, ಜಿ.ಪಂ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 138 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 68 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು